Sports

ಬೆಂಗಳೂರಿನಲ್ಲಿ ಮತ್ತೊಂದು ಪಂದ್ಯವಾಡಲಿರುವ ವಿರಾಟ್ ಕೊಹ್ಲಿ

Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕೊಹ್ಲಿ ಈವರೆಗೆ 2 ಪಂದ್ಯಗಳನ್ನಾಡಿದ್ದಾರೆ. ಇದೀಗ ಮತ್ತೊಂದು ಮ್ಯಾಚ್​ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.

  • ಗಾಝಾ ವಿಷಯದಲ್ಲಿ ಇಸ್ರೇಲ್‌ಗೆ ಬೆಂಬಲ, ಮಸೀದಿಗೆ ಭೇಟಿ ನೀಡಲು ಬಂದ ಆಸ್ಟ್ರೇಲಿಯಾ ಪ್ರಧಾನಿಗೆ ಪ್ರತಿಭಟನೆಯ ಬಿಸಿ: ಬೆಚ್ಚಿಬಿದ್ದ ಆಂಥೋನಿ ಅಲ್ಬನೀಸ್!

    ಸಿಡ್ನಿ, ಮಾರ್ಚ್ 21, 2026: ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಅವರು ಇಂದು ಸಿಡ್ನಿಯ ಮಸೀದಿಯೊಂದರಲ್ಲಿ ಈದ್ ಪ್ರಾರ್ಥನೆಯ ಸಂದರ್ಭದಲ್ಲಿ ಭೇಟಿ ನೀಡಿದ್ದಾಗ ತೀವ್ರ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಗಾಝಾ ವಿಷಯದಲ್ಲಿ ಇಸ್ರೇಲ್‌ಗೆ ಬೆಂಬಲ ನೀಡುತ್ತಿರುವ ಸರ್ಕಾರದ ನಡೆಯನ್ನು ಖಂಡಿಸಿ ಅಲ್ಲಿ ನೆರೆದಿದ್ದ ಮುಸ್ಲಿಂ ಸಮುದಾಯದವರು ಪ್ರಧಾನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರಾರ್ಥನಾ ಮಂದಿರದ ಒಳಗೆ ಮತ್ತು ಹೊರಗೆ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ಪ್ರಧಾನಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ​ಪರಿಸ್ಥಿತಿ ಹದಗೆಡುತ್ತಿದ್ದಂತೆಯೇ ಪ್ರತಿಭಟನಾಕಾರರು ಪ್ರಧಾನಿಯನ್ನು ಮಸೀದಿಯಿಂದ ಹೊರಕ್ಕೆ…


  • ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಸಂಚಲನ: ಇರಾನ್ ತೈಲಕ್ಕೆ ಅಮೆರಿಕದಿಂದ ’30 ದಿನಗಳ’ ವಿಶೇಷ ವಿನಾಯಿತಿ!

    ವಾಷಿಂಗ್ಟನ್, ಮಾರ್ಚ್ 21, 2026: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕಾ ನಡುವಿನ ಯುದ್ಧದ ಉದ್ವಿಗ್ನತೆ ತಾರಕಕ್ಕೇರಿರುವ ಈ ಸಂದರ್ಭದಲ್ಲಿ, ಜಾಗತಿಕ ಇಂಧನ ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಅಮೆರಿಕಾ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಇರಾನ್ ಮೇಲೆ ವಿಧಿಸಲಾಗಿದ್ದ ಕಟ್ಟುನಿಟ್ಟಿನ ತೈಲ ನಿರ್ಬಂಧಗಳಿಗೆ ತಾತ್ಕಾಲಿಕವಾಗಿ 30 ದಿನಗಳ ಕಾಲ ವಿನಾಯಿತಿ ನೀಡುವುದಾಗಿ ಅಮೆರಿಕಾ ಘೋಷಿಸಿದೆ. ಈ ಕ್ರಮವು ಗಗನಕ್ಕೇರುತ್ತಿರುವ ಕಚ್ಚಾ ತೈಲ ಬೆಲೆಯನ್ನು ನಿಯಂತ್ರಿಸುವ ಮತ್ತು ಜಾಗತಿಕ ಪೂರೈಕೆಯಲ್ಲಿನ ಅನಿಶ್ಚಿತತೆಯನ್ನು ಹೋಗಲಾಡಿಸುವ ಗುರಿಯನ್ನು ಹೊಂದಿದೆ. ​ಅಮೆರಿಕಾದ ಖಜಾನೆ ಕಾರ್ಯದರ್ಶಿ ಸ್ಕಾಟ್…


  • ಸರ್ಕಾರಿ ಶಾಲಾ ಮಕ್ಕಳ ಪಾದಕ್ಕೆ ಗೌರವ ಕೊಟ್ಟ ರಾಜ್ಯ ಸರ್ಕಾರ; ಶೂ-ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ!

    ಬೆಂಗಳೂರು, ಮಾರ್ಚ್ 18, 2026: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. 2026-27ನೇ ಸಾಲಿನ ಶೈಕ್ಷಣಿಕ ವರ್ಷವು ಆರಂಭವಾಗುವ ಮೊದಲೇ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಲು ಒಟ್ಟು 104 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಈ ಕ್ರಮದಿಂದಾಗಿ ಜೂನ್ ತಿಂಗಳಲ್ಲಿ ಶಾಲೆಗಳು ಪುನರಾರಂಭಗೊಂಡ ಕೂಡಲೇ ಮಕ್ಕಳು ಹೊಸ ಪಾದರಕ್ಷೆಗಳೊಂದಿಗೆ ತರಗತಿಗಳಿಗೆ ಹಾಜರಾಗಲು ಅನುಕೂಲವಾಗಲಿದೆ. ​ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ…


ಬೆಂಗಳೂರಿನಲ್ಲಿ ಮತ್ತೊಂದು ಪಂದ್ಯವಾಡಲಿರುವ ವಿರಾಟ್ ಕೊಹ್ಲಿ

ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಜನವರಿ 6 ರಂದು ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್​​ಸಿಎ ಮೈದಾನದಲ್ಲಿ ನಡೆಯಲಿರುವ ರೈಲ್ವೇಸ್​ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಖಚಿತಪಡಿಸಿದೆ.

ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಎರಡು ಪಂದ್ಯಗಳನ್ನಾಡಿದ್ದಾರೆ. ಬೆಂಗಳೂರಿನ ಸಿಇಒ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆಂಧ್ರ ಪ್ರದೇಶ್ ವಿರುದ್ಧ 131 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಮ್ಯಾಚ್​ನಲ್ಲಿ ಗುಜರಾತ್ ವಿರುದ್ಧ 77 ರನ್ ಕಲೆಹಾಕಿದ್ದರು. 

ಈ ಪಂದ್ಯದ ಬಳಿಕ ಮುಂಬೈಗೆ ತೆರಳಿದ್ದ ವಿರಾಟ್ ಕೊಹ್ಲಿ ಜನವರಿ 6 ರೊಳಗೆ ಮತ್ತೆ ದೆಹಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಡಿಡಿಎಸ್​ಎ ತಿಳಿಸಿದ್ದಾರೆ. ಅದರಂತೆ ದೆಹಲಿ ತಂಡದ 6ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮತ್ತೆ ಬ್ಯಾಟ್ ಬೀಸಲಿದ್ದಾರೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಚವನ್ನು ಸೇರಿಕೊಳ್ಳಲಿದ್ದಾರೆ.

ಭಾರತ-ನ್ಯೂಝಿಲೆಂಡ್ ಸರಣಿ:

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಜನವರಿ 7 ರಂದು ಬರೋಡಾದಲ್ಲಿ ಭಾರತೀಯ ಆಟಗಾರರು ಕೂಡಿಕೊಳ್ಳಲಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಪಂದ್ಯ ಮುಗಿಸಿ ಅದೇ ದಿನ ಬರೋಡಾಗೆ ತೆರಳುವ ಸಾಧ್ಯತೆಯಿದೆ.

ರಿಷಭ್ ಪಂತ್ ನಾಯಕ:

ವಿಜಯ ಹಝಾರೆ ಟೂರ್ನಿಯಲ್ಲಿ ದೆಹಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. ಈಗಾಗಲೇ ಮೂರು ಮ್ಯಾಚ್​ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಪಂತ್ ಅವರನ್ನು ಭಾರತ ಏಕದಿನ ತಂಡದಿಂದ ಕೈ ಬಿಟ್ಟರೆ, ದೇಶೀಯ ಟೂರ್ನಿಯಲ್ಲಿ ಮುಂದುವರೆಯಲಿದ್ದಾರೆ. ಅದು ಕೂಡ ನಾಯಕನಾಗಿ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ರಿಷಭ್ ಪಂತ್ ಆಯ್ಕೆಯಾಗದಿದ್ದರೆ ವಿಜಯ ಹಝಾರೆ ಟೂರ್ನಿಯಲ್ಲಿ ಅವರು ಕ್ಯಾಪ್ಟನ್ ಆಗಿ ಮುಂದುವರೆಯಲಿದ್ದಾರೆ.

ದೆಹಲಿ ತಂಡ: ರಿಷಭ್ ಪಂತ್ (ನಾಯಕ), ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ನವದೀಪ್ ಸೈನಿ, ಆಯುಷ್ ಬದೋನಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ದಹಿಯಾ, ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ದಿವಿಜ್ ಮೆಹ್ರ, ಆಯುಷ್ ದೋಸೆಜ, ವೈಭವ್ ಕಡ್ಪಲ್, ರೋಹನ್ ರಾಣಾ, ಅನೂಜ್ ರಾವತ್ (ಮೀಸಲು ಆಟಗಾರ).

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft