News

ಕಾನೂನಿಗಿಂತ ಯಾರೂ ದೊಡ್ಡವರಲ್ಲ’ ದರ್ಶನ್​ ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್

ಕಳೆದ ವರ್ಷ ಜೂನ್​ 11ರಂದು ದರ್ಶನ್ ಬಂಧನಕ್ಕೆ ಒಳಗಾದರು. ಆ ಬಳಿಕ ಅವರು ನಾಲ್ಕು ತಿಂಗಳಿಗೂ ಅಧಿಕ ಸಮಯ ಅವರು ಜೈಲಿನಲ್ಲಿ ಇರಬೇಕಾದ ಸ್ಥಿತಿ ಬಂದೊದಗಿತ್ತು. ಆ ಬಳಿಕ ಬೆನ್ನು ನೋವಿನ ಕಾರಣ ನೀಡಿ ಜೈಲಿನಿಂದ ಹೊರ ಬಂದರು. ಈಗ ಅವರು ಮತ್ತೆ ಜೈಲು ಸೇರಬೇಕಿದೆ.

ನಟ ದರ್ಶನ್​ಗೆ (Darshan) ಬಿಗ್ ಶಾಕ್ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದೆ. ಸುಪ್ರೀಂಕೋರ್ಟ್​​ನ ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಆರ್.ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠದಿಂದ ಈ ಆದೇಶ ಬಂದಿದೆ. ಇದರಿಂದ ದರ್ಶನ್ ತಕ್ಷಣವೇ ಜೈಲು ಸೇರಬೇಕಿದೆ. ದರ್ಶನ್ ವೃತ್ತಿ ಜೀವನದ ಮೇಲೆ ಈ ತೀರ್ಪು ತುಂಬಾನೇ ಪ್ರಭಾವ ಬೀರಲಿದೆ.

‘ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ’ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ‘ಆರೋಪಿ ಎಷ್ಟೇ ದೊಡ್ಡವರಿದ್ದರೂ ಅವರು ಕಾನೂನಿಗಿಂತ ದೊಡ್ಡವರಲ್ಲ. ಕಾನೂನು ಆಡಳಿತ ಎತ್ತಿ ಹಿಡಿಯಲಾಗಿದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ಚಿಕ್ಕವರಲ್ಲ. ಜೈಲಿನಲ್ಲಿ ಆರೋಪಿಗಳಿಗೆ 5 ಸ್ಟಾರ್ ಟ್ರೀಟ್ ಮೆಂಟ್ ನೀಡಲಾಗಿದೆ. ಜೈಲು ಸೂಪರಿಂಟೆಂಡ್​ನನ್ನು ಸಸ್ಪೆಂಡ್ ಮಾಡಬೇಕಿತ್ತು’ ಎಂದು ಕೊರ್ಟ್ ಅಭಿಪ್ರಾಯಪಟ್ಟಿದೆ. ಈ ತೀರ್ಪು ಲ್ಯಾಂಡ್ ಮಾರ್ಕ್ ತೀರ್ಪೆಂದು ಸುಪ್ರೀಂಕೋರ್ಟ್ ಹೇಳಿದೆ.

ದರ್ಶನ್ ಜೊತೆ ಪವಿತ್ರಾ ಗೌಡ, A6, ಜಗದೀಶ್ ಅಲಿಯಾಸ್ ಜಗ್ಗ, A7 ಅನುಕುಮಾರ್ ಅಲಿಯಾಸ್ ಅನು, ಎ14 ಪ್ರದೂಶ್, ಎ11  ನಾಗರಾಜು ಅಲಿಯಾಸ್ ನಾಗ, ಎ12 , ಲಕ್ಷ್ಮಣ್ ಜಾಮೀನು ಕೂಡ ರದ್ದಾಗಿದೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft