News

ನೀರಾವರಿ ಯೋಜನೆಗಳ ಜಾರಿಗೆ ಬಿಜೆಪಿಗೆ ಸವಾಲು ಹಾಕಿದ ಡಿಕೆ ಶಿವಕುಮಾರ್

ರಾಯಚೂರು: “ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು.

“ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ 5300 ಕೋಟಿ ರೂಪಾಯಿ ಇದುವರೆಗೂ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ” ಎಂದು ಕಿಡಿಕಾರಿದರು.

ಕೆಲಸ ಮಾಡುವವರನ್ನು ಪಕ್ಷ ಗುರುತಿಸುತ್ತದೆ

“ನಮ್ಮ ದೇಶದಲ್ಲಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನ ದೇವಾಲಯ ಎಲ್ಲಾ ಕಡೆ ಇವೆ. ಆಂಜನೇಯ ಸಮಾಜ ಸೇವಕ, ತ್ಯಾಗಿ. ಸಮಾಜದಲ್ಲಿ ಯಾರು ಸೇವೆ ಮಾಡುತ್ತಾರೋ ಸಮಾಜ ಅವರನ್ನು ಗುರುತಿಸುತ್ತದೆ. ಇದಕ್ಕೆ ಪಂಚಮುಖಿ ಆಂಜನೇಯನೇ ಸಾಕ್ಷಿ. ಹೀಗಾಗಿ ಜನರ ಮಧ್ಯೆ ನಿಷ್ಪಕ್ಷಪಾತವಾಗಿ, ಸೇವಾ ಮನೋಭಾವದಲ್ಲಿ ಕೆಲಸ ಮಾಡಿದರೆ ಸಮಾಜ ನಮ್ಮನ್ನು ಗುರುತುಸುತ್ತದೆ” ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.
‘ನಾನು ಗುಂಪು ರಾಜಕಾರಣ ಮಾಡಿದ್ದರೆ ಏನೇನೋ ಮಾಡಬಹುದಿತ್ತು!’

“ವ್ಯಕ್ತಿಗಿಂತ ಪಕ್ಷ ಮುಖ್ಯ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮಾಡಬೇಕು. ನಾನು ಎಂದಿಗೂ ಗುಂಪು ರಾಜಕಾರಣ ಮಾಡಿಲ್ಲ. ಮಾಡಿದ್ದರೆ ಏನೇನೋ ಮಾಡಬಹುದಿತ್ತು. ಕಾಂಗ್ರೆಸ್ ಪಕ್ಷ ಇದ್ದರೆ, ನಾವು ನೀವು ಇರುತ್ತೇವೆ. ನಾನು ಉಪಮುಖ್ಯಮಂತ್ರಿಯಾಗಿರುವುದು, ದದ್ದಲ್ ಅವರು ಶಾಸಕರು ಹಾಗೂ ಅಧ್ಯಕ್ಷರಾಗಿದ್ದಾರೆ. ಬೋಸರಾಜು ಅವರು ಶಾಸಕರಲ್ಲದಿದ್ದರೂ ಅವರನ್ನು ಸಚಿವರಾನ್ನಾಗಿ ಮಾಡಲಾಗಿದೆ. ಆವರು 45 ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದಾರೆ. ತೆಲಂಗಾಣದಲ್ಲಿ ದುಡಿದಿದ್ದಾರೆ. ಹಗಲು ರಾತ್ರಿ ಪಕ್ಷ ಸಂಘಟನೆ ಮಾಡಿದ್ದಾರೆ” ಎಂದರು.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft