News

ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ; ಸಿಎಲ್​​ಪಿ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ

Karnataka New CM: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಲ್‌ಪಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಿಕೆಶಿಯೇ ರಾಜ್ಯದ ಮುಂದಿನ ಸಿಎಂ ಆಗಲಿದ್ದಾರೆ ಎಂಬುದು ಈ ಹಿಂದೆಯೇ ನಿಶ್ಚಯವಾಗಿತ್ತಾದರೂ ಪ್ರಕ್ರಿಯೆಯಂತೆ ಸಿಎಲ್​​ಪಿ ಸಭೆ ನಡೆಸಿ ಆ ಬಳಿಕವೇ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆದಿದೆ.

ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ (Karnataka) ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್‌ (DK Shivakumar) ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಮುಖ್ಯಾಂಶಗಳು

ಸಿಎಂ ಪ್ರಮಾಣವಚನ ಕಾರ್ಯಕ್ರಮ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನಡೆಸಲು ತೀರ್ಮಾನ

ಜೂನ್ 3ನೇ ತಾರೀಕು ಪ್ರಮಾಣ ವಚನ ಮಾಡಲು ನಿರ್ಧಾರ

ತೈಲ ಬೆಲ ಏರಿಕೆ ಆಗಿರುವುದಿಂದ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಅಂತ ತೀರ್ಮಾನ

ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಘೋಷಣೆ

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft