News

ಮೈಸೂರು ದಸರಾದಲ್ಲಿ ಈ ಬಾರಿಯೂ ಮೊಳಗಲಿದೆ ಕಂಬಳದ ಕಹಳೆ; “ಕಂಬಳ ಇದೆಯೋ ಇಲ್ಲವೋ?” ಎಂಬ ಗೊಂದಲಕ್ಕೆ ಸಚಿವ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ

ಮೈಸೂರು, ಆ.26: ಈ ಬಾರಿಯ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವುದು ಖಚಿತ ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಕಂಬಳ ನಡೆಸಲು ಸ್ಥಳ ಗುರುತಿಸಲಾಗಿದ್ದು, ಅದೇ ಜಾಗದಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ದಸರಾ ಮಹೋತ್ಸವ-2026ರ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಕಂಬಳ ಆಯೋಜನೆಗೆ ಮುಖ್ಯಮಂತ್ರಿ ಕೂಡ ಸೂಚನೆ ನೀಡಿದ್ದಾರೆ ಎಂದು ಹೇಳಿದರು. ಹೀಗಾಗಿ ಈ ಬಾರಿಯ ದಸರಾ ಮಹೋತ್ಸವದಲ್ಲಿ ಕಂಬಳ ಪ್ರಮುಖ ಆಕರ್ಷಣೆಯಾಗುವ ನಿರೀಕ್ಷೆ ಮೂಡಿದೆ.

ಇದೇ ವೇಳೆ ದಸರಾ ಅಂಬಾರಿ ಹೊರುವ ಆನೆಯ ಆಯ್ಕೆ ಇನ್ನೂ ಅಂತಿಮವಾಗಿಲ್ಲ. ಆನೆಗಳಿಗೆ ತಾಲೀಮು ನಡೆಸಿದ ಬಳಿಕ ಅಂಬಾರಿ ಹೊರುವ ಆನೆಯನ್ನು ನಿರ್ಧರಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕಳೆದ 25 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಭಾಗಿಯಾಗಿದ್ದ ಹಾಗೂ ಆರು ಬಾರಿ ಅಂಬಾರಿ ಹೊತ್ತಿದ್ದ ಅಭಿಮನ್ಯು ಈ ಬಾರಿ ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ ಗಜಪಯಣದ ಸಂದರ್ಭದಲ್ಲಿ ಅಭಿಮನ್ಯುವಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಕರೆತರುವ ಬಗ್ಗೆಯೂ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft