News

ಸೆ. 5ರ ಸಿಜೆಪಿ ಮೆರವಣಿಗೆಯನ್ನು ನಿರ್ಬಂಧಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್! ಮೆರವಣಿಗೆಗೆ ಸಮ್ಮತಿ : ಶಾಂತಿ ಕಾನೂನು ಪಾಲನೆಗೆ ಸೂಚನೆ

ಹೊಸದಿಲ್ಲಿ, ಆ. 31: ಸೆಪ್ಟೆಂಬರ್ 5ರಂದು ದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಮೆರವಣಿಗೆಗೆ ನಿರ್ಬಂಧ ವಿಧಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯಲಿದೆ ಎಂದು ಊಹಿಸಲು ಸದ್ಯ ಯಾವುದೇ ಬಲವಾದ ಕಾರಣವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ತಿಳಿಸಿದ್ದಾರೆ.

ಮೆರವಣಿಗೆ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ. ಎಲ್ಲಾ ಕಡೆಯವರು ಶಾಂತಿಯುತವಾಗಿ, ಜವಾಬ್ದಾರಿಯುತವಾಗಿ ಹಾಗೂ ಕಾನೂನಿಗೆ ಅನುಗುಣವಾಗಿ ನಡೆದುಕೊಳ್ಳುವಂತೆ ಅಧಿಕಾರಿಗಳು ಖಚಿತಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ.

ಸೆಪ್ಟೆಂಬರ್ 12 ಮತ್ತು 13ರಂದು ರಾಷ್ಟ್ರ ರಾಜಧಾನಿಯಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿರುವ ಹಿನ್ನೆಲೆಯಲ್ಲಿ, ಸೆಪ್ಟೆಂಬರ್ 5ರ ಸಿಜೆಪಿ ಮೆರವಣಿಗೆಗೆ ನಿರ್ಬಂಧ ವಿಧಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಿರ್ಬಂಧ ವಿಧಿಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಜುಲೈ 25ರಂದು ಸರ್ಕಾರ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಸಿಜೆಪಿ ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ದಿಲ್ಲಿ ಪೊಲೀಸ್ ಪ್ರಧಾನ ಕಚೇರಿವರೆಗೆ ಶಾಂತಿಯುತ ಮೆರವಣಿಗೆ ನಡೆಸುವುದಾಗಿ ಘೋಷಿಸಿತ್ತು. ಮೃತಪಟ್ಟ ನೀಟ್ ಸಂತ್ರಸ್ತರ ಕುಟುಂಬಗಳು, ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಯುವಜನರು ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪಕ್ಷ ತಿಳಿಸಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft