Business News

ಚಿನ್ನ ಖರೀದಿಸಬೇಡಿ, ವಿದೇಶದಲ್ಲಿ ವಿವಾಹ ಆಗಬೇಡಿ! ಪ್ರವಾಸ ಕಡಿಮೆಗೊಳಿಸಿ : ಸ್ವದೇಶಿ ಉತ್ಪನ್ನಗಳಿಗೆ ಆದ್ಯತೆ ನೀಡುವಂತೆ ಪ್ರಧಾನಿ ಮೋದಿ ವೀಡಿಯೊ ಮೂಲಕ ಕರೆ

ಹೊಸದಿಲ್ಲಿ, ಸೆ. 1: ಭಾರತೀಯರು ಅನಗತ್ಯ ವಿದೇಶ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದೆ ವಿದೇಶಗಳಿಂದ ಚಿನ್ನ ಖರೀದಿಸುವುದನ್ನು ತಪ್ಪಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಮಂಗಳವಾರ ವಿಡಿಯೋ ಸಂದೇಶದ ಮೂಲಕ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಪ್ರಗತಿಗೆ ಸ್ವದೇಶಿ ವಸ್ತುಗಳ ಬಳಕೆ ಹಾಗೂ ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಕಿರ್ಗಿಸ್ತಾನದ ರಾಜಧಾನಿ ಬಿಷ್ಕೆಕ್‌ಗೆ ತೆರಳಿರುವ ಪ್ರಧಾನಿ ಮೋದಿ, ಭಾರತವು ಮೊದಲ ತ್ರೈಮಾಸಿಕದಲ್ಲಿ ಶೇ.7.8ರಷ್ಟು ಜಿಡಿಪಿ ಬೆಳವಣಿಗೆ ದಾಖಲಿಸಿರುವುದನ್ನು ಉಲ್ಲೇಖಿಸಿದರು. ಇದೇ ವೇಗವನ್ನು ಮುಂದುವರಿಸಲು ದೇಶದ ಜನರು ಸ್ವದೇಶಿ ಉತ್ಪನ್ನಗಳಿಗೆ ಆದ್ಯತೆ ನೀಡಬೇಕು ಎಂದು ಅವರು ಕರೆ ನೀಡಿದ್ದಾರೆ.

“ಕೇವಲ ವಿಹಾರಕ್ಕಾಗಿ ವಿದೇಶ ಪ್ರವಾಸ ಕೈಗೊಳ್ಳುತ್ತಿದ್ದರೆ ಹೋಗಬೇಡಿ. ವಿದೇಶದಲ್ಲಿ ಮದುವೆಯಾಗುತ್ತಿದ್ದರೆ ಹಾಗೆ ಮಾಡಬೇಡಿ. ಅಗತ್ಯವಿಲ್ಲದಿದ್ದರೆ ಚಿನ್ನವನ್ನೂ ಖರೀದಿಸಬೇಡಿ” ಎಂದು ಪ್ರಧಾನಿ ಮನವಿ ಮಾಡಿದ್ದಾರೆ. ಸ್ವದೇಶಿ ಹಾಗೂ ಸ್ವಾವಲಂಬನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದರೆ, ಸ್ವಾತಂತ್ರ್ಯದ 100 ವರ್ಷ ಪೂರ್ಣಗೊಳ್ಳುವ ವೇಳೆಗೆ ಯುವ ಪೀಳಿಗೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನೀಡಲು ಸಾಧ್ಯವಾಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ದೇಶದೊಳಗಿನ ಕೆಲವರು ಹತಾಶೆಯ ವಾತಾವರಣದಲ್ಲಿ ಮುಳುಗಿ ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ತಮ್ಮ ವಿಮರ್ಶಕರ ವಿರುದ್ಧ ವಾಗ್ದಾಳಿ ನಡೆಸಿದರು. ಇಂತಹ ಸವಾಲುಗಳ ನಡುವೆಯೂ ಭಾರತ ಶೇ.7.8ರ ಆರ್ಥಿಕ ಬೆಳವಣಿಗೆ ಸಾಧಿಸಿದ್ದು, ಇದೇ ವೇಗವನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಅವರು ಹೇಳಿದರು.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft