News

ರಾಜ್ಯದಲ್ಲಿ 800 ಬಾಲಕಾರ್ಮಿಕರು ಪತ್ತೆ; ಅವುಗಳ ಪೈಕಿ ಬೆಂಗಳೂರಿನಲ್ಲೇ ಮುಕ್ಕಾಲು ಪಾಲು ಬಾಲಕಾರ್ಮಿಕರು! ಮಕ್ಕಳನ್ನು ಕಾರ್ಮಿಕರಾಗಿ ಇರಿಸಿಕೊಂಡವರ ಮೇಲೆ ಕಠಿಣ ಕ್ರಮದ ಎಚ್ಚರಿಕೆ!

ಬೆಂಗಳೂರು, ಸೆಪ್ಟೆಂಬರ್ 16 : ಬಾಲಕಾರ್ಮಿಕ ಪದ್ಧತಿ ವಿರುದ್ಧ ಕಾರ್ಮಿಕ ಇಲಾಖೆ ಹಾಗೂ ಸಂಬಂಧಿತ ಅಧಿಕಾರಿಗಳು ರಾಜ್ಯದ ವಿವಿಧೆಡೆ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಸುಮಾರು 800 ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಹೋಟೆಲ್‌ಗಳು, ಮಾರುಕಟ್ಟೆಗಳು, ವಸತಿಗೃಹಗಳು, ಶೋರೂಂಗಳು, ಗ್ಯಾರೇಜ್‌ಗಳು, ಪೆಟ್ರೋಲ್ ಬಂಕ್‌ಗಳು, ಮಾಲ್‌ಗಳು ಹಾಗೂ ಇ-ಕಾಮರ್ಸ್ ದಾಸ್ತಾನು ಕೇಂದ್ರಗಳು ಸೇರಿದಂತೆ ರಾಜ್ಯದ 16,951 ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದೆ.

ಕಾರ್ಯಾಚರಣೆಯಲ್ಲಿ ಕರ್ನಾಟಕದ ಮಕ್ಕಳ ಜೊತೆಗೆ ಬಿಹಾರ, ರಾಜಸ್ಥಾನ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಅಸ್ಸಾಂ ಸೇರಿದಂತೆ ವಿವಿಧ ರಾಜ್ಯಗಳಿಗೆ ಸೇರಿದ ಮಕ್ಕಳು ಪತ್ತೆಯಾಗಿದ್ದಾರೆ. ನೆರೆಯ ರಾಷ್ಟ್ರ ನೇಪಾಳಕ್ಕೆ ಸೇರಿದ ಮಕ್ಕಳೂ ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ.

ಬೆಂಗಳೂರು ನಗರದಲ್ಲಿ 5,897 ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದ್ದು, 503 ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ 72 ಮಕ್ಕಳು ಪತ್ತೆಯಾಗಿದ್ದು, ಅಪಾಯಕಾರಿ ಕೆಲಸಗಳಲ್ಲಿ ಮಕ್ಕಳನ್ನು ತೊಡಗಿಸಿಕೊಂಡಿದ್ದ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಪಾಯಕಾರಿಯಲ್ಲದ ಕೆಲಸಗಳಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದವರಿಗೆ ನೋಟಿಸ್ ನೀಡುವ ಕ್ರಮ ಕೈಗೊಳ್ಳಲಾಗಿದೆ.

ಬಾಲಕಾರ್ಮಿಕರನ್ನು ಪತ್ತೆಹಚ್ಚಿ ರಕ್ಷಿಸುವುದರ ಜೊತೆಗೆ ಅವರ ಪುನರ್ವಸತಿ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೋಷಕರಲ್ಲಿ ಜಾಗೃತಿ ಮೂಡಿಸುವುದು, ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವುದು ಹಾಗೂ ಮಕ್ಕಳನ್ನು ಮತ್ತೆ ಬಾಲಕಾರ್ಮಿಕತೆಗೆ ತಳ್ಳದಂತೆ ನಿರಂತರ ನಿಗಾ ವಹಿಸುವ ಅಗತ್ಯವೂ ಇದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft