News

ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಯೋಧ ಹಾಗೂ ಪುತ್ರಿಯ ಬ*ರ್ಬರ ಕೊ*ಲೆ! ಒಂದಾಗಿ ಉಸಿರು ಚೆಲ್ಲಿದ ‘ಅಪ್ಪ ,ಮಗಳು’!ಘಟನೆ ಎಲ್ಲೋ ಉತ್ತರ ಭಾರತದಲ್ಲಲ್ಲ, ನಮ್ಮದೇ ಕರ್ನಾಟಕದಲ್ಲಿ!

ಬೆಳಗಾವಿ, ಸೆಪ್ಟೆಂಬರ್ 17 : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಹಾಡುಹಗಲೇ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಮಾಜಿ ಸೈನಿಕ ಹಾಗೂ ಅವರ ಪುತ್ರಿಯನ್ನು ಮಾರಕಾಸ್ತ್ರಗಳಿಂದ ಹತ್ಯೆಗೈದ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರ ಸಮ್ಮುಖದಲ್ಲೇ ನಡೆದ ಈ ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ.

ಹತ್ಯೆಗೀಡಾದವರನ್ನು ಅವರಾದಿ ಗ್ರಾಮದ ನಿವಾಸಿ, 67 ವರ್ಷದ ಮಾಜಿ ಸೈನಿಕ ರುದ್ರಪ್ಪ ಕುಂದರಗಿ ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ ಎಂದು ಗುರುತಿಸಲಾಗಿದೆ. ಕುಟುಂಬದ ಆಸ್ತಿ ಹಂಚಿಕೆ ವಿಚಾರವಾಗಿ ಹಲವು ದಿನಗಳಿಂದ ವಿವಾದವಿತ್ತು ಎನ್ನಲಾಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ಹಾಗೂ ದಾಖಲೆಗಳ ಪರಿಶೀಲನೆಗಾಗಿ ತಂದೆ-ಮಗಳು ಗ್ರಾಮ ಪಂಚಾಯಿತಿ ಕಚೇರಿಗೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ಮಾತಿಗೆ ಮಾತು ಬೆಳೆದು ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ರುದ್ರಪ್ಪ ಅವರ ಇಬ್ಬರು ಸಹೋದರರು ಹಾಗೂ ಸಹೋದರನ ಪುತ್ರ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ತಂದೆಯ ಮೇಲಿನ ದಾಳಿಯನ್ನು ತಡೆಯಲು ಶಶಿಕಲಾ ಮಧ್ಯಪ್ರವೇಶಿಸಿದಾಗ ಅವರ ಮೇಲೂ ದಾಳಿ ನಡೆದಿದೆ ಎಂದು ವರದಿಯಾಗಿದೆ. ತೀವ್ರವಾಗಿ ಗಾಯಗೊಂಡ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಕಿತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಪರಾಧ ತನಿಖಾ ತಂಡ ಹಾಗೂ ವಿಧಿವಿಜ್ಞಾನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಆಸ್ತಿ ವಿವಾದವೇ ಹತ್ಯೆಗೆ ಕಾರಣವೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft