News

ಮದುವೆ ಬೇರೆಡೆ ನಿಶ್ಚಯವಾಗಿದ್ದಕ್ಕೆ ಆಕ್ರೋಶ? 1,000 ಅಡಿ ಪ್ರಪಾತದಲ್ಲಿ ಯುವತಿಯ ಮೃತದೇಹ; ಆತ್ಮಹತ್ಯೆಯ ಕತೆ ಹೇಳಿದ ಪ್ರಿಯಕರ ಅರೆಸ್ಟ್!

ಕೊಲ್ಹಾಪುರ, 12-10-2026 : ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯಲ್ಲಿ 1,000 ಅಡಿ ಆಳದ ಪ್ರಪಾತದಲ್ಲಿ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿ ಆಕೆಯ 25 ವರ್ಷದ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಯುವತಿಯನ್ನು ತರ್ರನ್ನುಮ್ ನಾಯ್ಕ್ ಎಂದು ಗುರುತಿಸಲಾಗಿದ್ದು, ಆಕೆಯ ಸಾವಿನ ಹಿಂದೆ ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಅನುಮಾನಗಳು ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿವೆ.

ಗರ್ಗೋತಿ ಮೂಲದ ತರ್ರನ್ನುಮ್ ಮೂರನೇ ವರ್ಷದ ಇಂಜಿನಿಯರಿಂಗ್ ಪದವಿ ವ್ಯಾಸಂಗ ಮಾಡುತ್ತಿದ್ದರು. ಆಕೆಯ ವಿವಾಹವನ್ನು ಕುಟುಂಬದವರು ಬೇರೊಬ್ಬ ಯುವಕನೊಂದಿಗೆ ನಿಶ್ಚಯಿಸಿದ್ದರು ಎನ್ನಲಾಗಿದೆ. ನವೆಂಬರ್ 12ರಂದು ಮದುವೆ ನಿಗದಿಯಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಸುಮಾರು ಐದೂವರೆ ವರ್ಷಗಳಿಂದ ತರ್ರನ್ನುಮ್ ಜೊತೆ ಪ್ರೇಮ ಸಂಬಂಧ ಹೊಂದಿದ್ದ ಶ್ರೀಪಾದ್ ವದರ್ (25), ಆಕೆಯ ಸಾವಿನ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.

ಆರಂಭದಲ್ಲಿ ಪೊಲೀಸರಿಗೆ ಹೇಳಿಕೆ ನೀಡಿದ್ದ ಶ್ರೀಪಾದ್, ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೆವು. ತರ್ರನ್ನುಮ್ ಪ್ರಪಾತಕ್ಕೆ ಹಾರಿದರೂ, ಕೊನೆಯ ಕ್ಷಣದಲ್ಲಿ ತಾನು ಭಯದಿಂದ ಹಿಂದೆ ಸರಿದೆ ಎಂದು ತಿಳಿಸಿದ್ದ ಎನ್ನಲಾಗಿದೆ. ಆದರೆ, ಇಬ್ಬರ ಮೊಬೈಲ್ ಸಂದೇಶಗಳನ್ನು ಪರಿಶೀಲಿಸಿದ ಪೊಲೀಸರಿಗೆ ಆತನ ಹೇಳಿಕೆಯ ಬಗ್ಗೆ ಅನುಮಾನ ಮೂಡಿದೆ. ಯುವತಿಯ ವಿವಾಹವನ್ನು ಬೇರೆ ಯುವಕನೊಂದಿಗೆ ನಿಶ್ಚಯಿಸಿದ್ದಕ್ಕೆ ಶ್ರೀಪಾದ್ ಅಸಮಾಧಾನಗೊಂಡಿದ್ದುದನ್ನು ಸಂದೇಶಗಳು ಸೂಚಿಸುತ್ತವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103(1)ರ ಅಡಿಯಲ್ಲಿ ಹತ್ಯೆ ಪ್ರಕರಣ ದಾಖಲಿಸಿಕೊಂಡು ಶ್ರೀಪಾದ್‌ನನ್ನು ಬಂಧಿಸಿದ್ದಾರೆ. ಪ್ರಕರಣದ ತನಿಖೆಗಾಗಿ ಇಬ್ಬರ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗೂ ಒಳಪಡಿಸಲಾಗುತ್ತಿದೆ. ಯುವತಿ ತಾನಾಗಿಯೇ ಪ್ರಪಾತಕ್ಕೆ ಬಿದ್ದಳೇ ಅಥವಾ ಆಕೆಯನ್ನು ತಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ಸ್ಥಳೀಯ ನ್ಯಾಯಾಲಯವು ಆರೋಪಿಯನ್ನು ಐದು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ತನಿಖೆಯಿಂದ ಹೊರಬರಬೇಕಿದ್ದು, ಯುವತಿಯ ಸಾವಿಗೆ ನ್ಯಾಯ ದೊರಕಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft