
ಉಡುಪಿ : ಕೆಜಿಎಫ್ ಚಾಚ ಖ್ಯಾತಿಯ ಖ್ಯಾತ ಖಳನಟ ಹರೀಶ್ ರಾಯ್ ಇನ್ನಿಲ್ಲ..!!ಉಡುಪಿ :ಸುಮಾರು 2 ದಶಕಗಳಿಂದ ಚಿತ್ರರಂಗದಲ್ಲಿರುವ ಇವರು ಕನ್ನಡ ಮಾತ್ರವಲ್ಲದೆ, ತಮಿಳು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅನೇಕ ಚಿತ್ರದಲ್ಲಿ ವಿಲನ್ ಪಾತ್ರದ ಮೂಲಕವೇ ಪ್ರಸಿದ್ದಿಗೆ ಬಂದ ನಟರಾಗಿದ್ದಾರೆ ಹರೀಶ್ ರಾಯ್.ಕ್ಯಾನ್ಸರ್ನಿಂದ ಬಳಲುತ್ತಿದ್ದ ಅವರು ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಇಬ್ಬರು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ.
ಓಂ ಸಿನಿಮಾದಲ್ಲಿ ಡಾನ್ ಪಾತ್ರದ ಮೂಲಕ ಖ್ಯಾತಿ ಪಡೆದಿದ್ದ ಹರೀಶ್ ರಾಯ್ ಕೆಜಿಎಫ್ ಸರಣಿಯಲ್ಲಿ ಚಾಚಾ’ ಆಗಿ ಪ್ರಸಿದ್ದರಾಗಿದ್ದರು. ಸಮರ, ಬೆಂಗಳೂರು ಅಂಡರ್ ವರ್ಲ್ಡ್, ಜೋಡಿಹಕ್ಕಿ, ರಾಜ್ ಬಹದ್ದೂರ್, ಸಂಜು ವೆಡ್ಸ್ ಗೀತಾ, ಸ್ವಯಂವರ ಸೇರಿದಂತೆ ಹಲವ ಸಿನಿಮಾಗಳಲ್ಲಿ ಅಭಿನಯಿಸಿದ್ದರು.ಉಡುಪಿ ಅಂಬಲಪಾಡಿಯ ನಿವಾಸಿ ಹರೀಶ್ ರಾಯ್, ಸಿನಿಮಾ ರಂಗಕ್ಕೆ ಬರುವ ಮೊದಲು ಉಡುಪಿಯ ರಥಬೀದಿಯಲ್ಲಿ ಚಿನ್ನದಂಗಡಿ ಇಟ್ಟುಕೊಂಡಿದ್ದರು.
ಹರೀಶ್ ರಾಯ್ ಉಡುಪಿಯ ಚಿನ್ನಾಭರಣ ಮಳಿಗೆ ನೋವೆಲ್ಟಿ ಜ್ಯುವೆಲ್ಲರ್ಸ್ ಮಾಲಕರ ಅಕ್ಕನ ಮಗ.ಕಳೆದ ಕೆಲ ವರ್ಷಗಳಿಂದಲೂ ಅನಾರೋಗ್ಯದೊಂದಿಗೆ ಸತತ ಹೋರಾಟ ಮಾಡುತ್ತಲೇ ಇದ್ದ ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’ ಸೇರಿದಂತೆ ‘ಕೆಜಿಎಫ್’, ‘ಕೆಜಿಎಫ್ 2’ ಹಾಗೂ ಕನ್ನಡದ ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ ನಟಿಸಿದ್ದ ಹರೀಶ್ ರಾಯ್ ಅವರು ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದರು. ನಟ ಯಶ್ ಸೇರಿದಂತೆ ಇನ್ನೂ ಹಲವರು ಹರೀಶ್ ರಾಯ್ ಅವರಿಗೆ ಆರ್ಥಿಕ ಸಹಾಯ ಮಾಡಿದ್ದರು. ಆದರೆ ಅಂತಿಮವಾಗಿ ಹರೀಶ್ ಅವರು ಇಂದು ನಿಧನ ಹೊಂದಿದ್ದಾರೆ.



