Virat Kohli: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗೂ ಮುನ್ನ ದೇಶೀಯ ಅಂಗಳದಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯಲ್ಲಿ ಕೊಹ್ಲಿ ಈವರೆಗೆ 2 ಪಂದ್ಯಗಳನ್ನಾಡಿದ್ದಾರೆ. ಇದೀಗ ಮತ್ತೊಂದು ಮ್ಯಾಚ್ನಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದಾರೆ.
-
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ಸುವೇಂದು ಅಧಿಕಾರಿಯನ್ನು ಭೇಟಿ ಮಾಡಿದ 13 ಟಿಎಂಸಿ ಸಂಸದರು! ಎನ್ಡಿಎ ಮೈತ್ರಿಕೂಟಕ್ಕೆ ಬೆಂಬಲ ನೀಡುವ ನಿರ್ಧಾರ !?

Spread the love
-
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಎಚ್ಐವಿ ಭೀತಿ: ಡೇಟಿಂಗ್ ಆಪ್ ಮತ್ತು ಅಸುರಕ್ಷಿತ ಸಲಿಂಗ ಸಂಪರ್ಕವೇ ಮುಖ್ಯ ಕಾರಣ! ಸಾರ್ವಜನಿಕ ಆರೋಗ್ಯ ವಲಯದಲ್ಲಿ ತೀವ್ರ ಆತಂಕ
ಬೆಂಗಳೂರು, ಜೂನ್ 9, 2026: ಕರ್ನಾಟಕ ರಾಜ್ಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಎಚ್ಐವಿ (HIV) ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಸಾರ್ವಜನಿಕ ಆರೋಗ್ಯ ವಲಯದಲ್ಲಿ ತೀವ್ರ ಕಳವಳ ಮೂಡಿಸಿದೆ. ರಾಜ್ಯ ಆರೋಗ್ಯ ಇಲಾಖೆಯ ಇತ್ತೀಚಿನ ವರದಿಗಳ ಪ್ರಕಾರ, ವರ್ಷದಿಂದ ವರ್ಷಕ್ಕೆ ಎಚ್ಐವಿ ಪ್ರಕರಣಗಳು ಜಿಗಿತ ಕಾಣುತ್ತಿದ್ದು, ಯುವ ಪೀಳಿಗೆಯಲ್ಲಿ ಈ ಸೋಂಕು ವ್ಯಾಪಕವಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ವಿಶೇಷವಾಗಿ ಡೇಟಿಂಗ್ ಆಪ್ಗಳ ಬಳಕೆಯು ಈ ಪ್ರವೃತ್ತಿಗೆ ಪರೋಕ್ಷವಾಗಿ ಕಾರಣವಾಗುತ್ತಿದ್ದು, ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ…
-
ಬಿಜೆಪಿ ಮತ್ತು ಕಾಂಗ್ರೆಸ್ ವಿರೋಧಿ ಹೊಸ ಒಕ್ಕೂಟ ರಚನೆಗೆ ಡಿಎಂಕೆ ಚಿಂತನೆ: ಪ್ರಾದೇಶಿಕ ಪಕ್ಷಗಳೊಂದಿಗೆ ಮಾತುಕತೆ ಚುರುಕು
ಚೆನ್ನೈ, ಜೂನ್ 9, 2026: ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ (INDIA) ಮೈತ್ರಿಕೂಟದಿಂದ ದೂರ ಉಳಿದಿರುವ ದ್ರಾವಿಡ ಮುನ್ನೇತ್ರ ಕಳಗಂ (DMK) ಪಕ್ಷವು, ಈಗ ರಾಷ್ಟ್ರೀಯ ಮಟ್ಟದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡಕ್ಕೂ ಪರ್ಯಾಯವಾಗಿ ಹೊಸದೊಂದು ರಾಜಕೀಯ ಒಕ್ಕೂಟವನ್ನು ರಚಿಸುವ ಗಂಭೀರ ಪ್ರಯತ್ನಗಳಿಗೆ ಚಾಲನೆ ನೀಡಿದೆ. ದೇಶದ ಪ್ರಮುಖ ಪ್ರಾದೇಶಿಕ ಪಕ್ಷಗಳನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ ಬಲಿಷ್ಠ ತೃತೀಯ ರಂಗವನ್ನು ಕಟ್ಟುವ ಉದ್ದೇಶವನ್ನು ಡಿಎಂಕೆ ಹೊಂದಿದ್ದು, ಈ ನಿಟ್ಟಿನಲ್ಲಿ ಯಾವುದೇ ಆತುರ ತೋರದೆ ಹಂತ ಹಂತವಾಗಿ ರಾಜಕೀಯ ಸಮಾಲೋಚನೆಗಳನ್ನು…

ನ್ಯೂಝಿಲೆಂಡ್ ವಿರುದ್ಧದ ಸರಣಿಗೂ ಮುನ್ನ ವಿಜಯ ಹಝಾರೆ ಟೂರ್ನಿಯಲ್ಲಿ ಮತ್ತೊಂದು ಪಂದ್ಯವಾಡಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ. ಜನವರಿ 6 ರಂದು ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್ಸಿಎ ಮೈದಾನದಲ್ಲಿ ನಡೆಯಲಿರುವ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ವಿರಾಟ್ ಕೊಹ್ಲಿ ಕೂಡ ಕಣಕ್ಕಿಳಿಯಲಿದ್ದಾರೆ ಎಂದು ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಖಚಿತಪಡಿಸಿದೆ.
ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಎರಡು ಪಂದ್ಯಗಳನ್ನಾಡಿದ್ದಾರೆ. ಬೆಂಗಳೂರಿನ ಸಿಇಒ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆಂಧ್ರ ಪ್ರದೇಶ್ ವಿರುದ್ಧ 131 ರನ್ ಬಾರಿಸಿದ್ದರು. ಇನ್ನು ದ್ವಿತೀಯ ಮ್ಯಾಚ್ನಲ್ಲಿ ಗುಜರಾತ್ ವಿರುದ್ಧ 77 ರನ್ ಕಲೆಹಾಕಿದ್ದರು.
ಈ ಪಂದ್ಯದ ಬಳಿಕ ಮುಂಬೈಗೆ ತೆರಳಿದ್ದ ವಿರಾಟ್ ಕೊಹ್ಲಿ ಜನವರಿ 6 ರೊಳಗೆ ಮತ್ತೆ ದೆಹಲಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಡಿಡಿಎಸ್ಎ ತಿಳಿಸಿದ್ದಾರೆ. ಅದರಂತೆ ದೆಹಲಿ ತಂಡದ 6ನೇ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಮತ್ತೆ ಬ್ಯಾಟ್ ಬೀಸಲಿದ್ದಾರೆ. ಈ ಪಂದ್ಯದ ಬಳಿಕ ವಿರಾಟ್ ಕೊಹ್ಲಿ ಟೀಮ್ ಇಂಡಿಯಾಚವನ್ನು ಸೇರಿಕೊಳ್ಳಲಿದ್ದಾರೆ.
ಭಾರತ-ನ್ಯೂಝಿಲೆಂಡ್ ಸರಣಿ:
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಈ ಸರಣಿಗಾಗಿ ಜನವರಿ 7 ರಂದು ಬರೋಡಾದಲ್ಲಿ ಭಾರತೀಯ ಆಟಗಾರರು ಕೂಡಿಕೊಳ್ಳಲಿದ್ದಾರೆ. ಅಂದರೆ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಪಂದ್ಯ ಮುಗಿಸಿ ಅದೇ ದಿನ ಬರೋಡಾಗೆ ತೆರಳುವ ಸಾಧ್ಯತೆಯಿದೆ.
ರಿಷಭ್ ಪಂತ್ ನಾಯಕ:
ವಿಜಯ ಹಝಾರೆ ಟೂರ್ನಿಯಲ್ಲಿ ದೆಹಲಿ ತಂಡವನ್ನು ರಿಷಭ್ ಪಂತ್ ಮುನ್ನಡೆಸುತ್ತಿದ್ದಾರೆ. ಈಗಾಗಲೇ ಮೂರು ಮ್ಯಾಚ್ಗಳಲ್ಲಿ ನಾಯಕನಾಗಿ ಕಣಕ್ಕಿಳಿದಿರುವ ಪಂತ್ ಅವರನ್ನು ಭಾರತ ಏಕದಿನ ತಂಡದಿಂದ ಕೈ ಬಿಟ್ಟರೆ, ದೇಶೀಯ ಟೂರ್ನಿಯಲ್ಲಿ ಮುಂದುವರೆಯಲಿದ್ದಾರೆ. ಅದು ಕೂಡ ನಾಯಕನಾಗಿ. ಅಂದರೆ ನ್ಯೂಝಿಲೆಂಡ್ ವಿರುದ್ಧದ ಸರಣಿಗೆ ರಿಷಭ್ ಪಂತ್ ಆಯ್ಕೆಯಾಗದಿದ್ದರೆ ವಿಜಯ ಹಝಾರೆ ಟೂರ್ನಿಯಲ್ಲಿ ಅವರು ಕ್ಯಾಪ್ಟನ್ ಆಗಿ ಮುಂದುವರೆಯಲಿದ್ದಾರೆ.
ದೆಹಲಿ ತಂಡ: ರಿಷಭ್ ಪಂತ್ (ನಾಯಕ), ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ, ನವದೀಪ್ ಸೈನಿ, ಆಯುಷ್ ಬದೋನಿ, ಅರ್ಪಿತ್ ರಾಣಾ, ಯಶ್ ಧುಲ್, ಸಾರ್ಥಕ್ ರಂಜನ್, ಪ್ರಿಯಾಂಶ್ ಆರ್ಯ, ತೇಜಸ್ವಿ ದಹಿಯಾ, ನಿತೀಶ್ ರಾಣಾ, ಹೃತಿಕ್ ಶೋಕೀನ್, ಹರ್ಷ್ ತ್ಯಾಗಿ, ಸಿಮರ್ಜೀತ್ ಸಿಂಗ್, ಪ್ರಿನ್ಸ್ ಯಾದವ್, ದಿವಿಜ್ ಮೆಹ್ರ, ಆಯುಷ್ ದೋಸೆಜ, ವೈಭವ್ ಕಡ್ಪಲ್, ರೋಹನ್ ರಾಣಾ, ಅನೂಜ್ ರಾವತ್ (ಮೀಸಲು ಆಟಗಾರ).




