Health +

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ?

ಚಳಿಗಾಲದಲ್ಲಿ ಪದೇ ಪದೇ ಆರೋಗ್ಯ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಆದರೆ ದೇಹವನ್ನು ಅನಾರೋಗ್ಯದಿಂದ ದೂರವಿಟ್ಟುಕೊಳ್ಳಲು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಖರ್ಜೂರ ಅಥವಾ ಬಾದಾಮಿ; ಈ ಋತುಮಾನಕ್ಕೆ ಯಾವುದರ ಸೇವನೆ ಆರೋಗ್ಯಕರ?

ಚಳಿಗಾಲದಲ್ಲಿ, ದೇಹದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದು ಸಾಮಾನ್ಯ. ಪರಿಣಾಮವಾಗಿ, ಕಾಲೋಚಿತ ಕಾಯಿಲೆಗಳಿಗೆ ದೇಹ ಬೇಗ ಒಡ್ಡಿಕೊಳ್ಳುವ ಸಾಧ್ಯತೆ ಹೆಚ್ಚಾಗುತ್ತದೆ. ಹಾಗಾಗಿ, ಈ ಋತುಮಾನದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಮತ್ತು ದೇಹವನ್ನು ಒಳಗಿನಿಂದ ಬೆಚ್ಚಗಿಡುವ ಆಹಾರ ಸೇವನೆ ಮಾಡುವುದು ಬಹಳ ಮುಖ್ಯವಾಗುತ್ತದೆ. ಅದಕ್ಕಾಗಿಯೇ ಆರೋಗ್ಯ ತಜ್ಞರು ನಿಯಮಿತವಾಗಿ ಖರ್ಜೂರ (Dates) ಮತ್ತು ಬಾದಾಮಿಯಂತಹ ಒಣ ಹಣ್ಣುಗಳ ತಿನ್ನಿ ಎಂದು ಸಲಹೆ ನೀಡುತ್ತಾರೆ. ಇವೆರಡೂ ಆರೋಗ್ಯಕರ, ಆದರೆ ಅವುಗಳ ಪ್ರಯೋಜನಗಳು ವಿಭಿನ್ನವಾಗಿರುತ್ತದೆ. ಹಾಗಾದರೆ ಇವೆರಡರಲ್ಲಿ ಯಾವುದು ಒಳ್ಳೆಯದು, ಇವುಗಳ ಸೇವನೆಯಿಂದ ಸಿಗುವ ಪ್ರಯೋಜನಗಳೇನು ತಿಳಿದುಕೊಳ್ಳಿ.

ಚಳಿಗಾಲದಲ್ಲಿ ಖರ್ಜೂರ ತಿನ್ನುವುದರಿಂದಾಗುವ ಪ್ರಯೋಜನಗಳು:

ಖರ್ಜೂರವು ಗ್ಲೂಕೋಸ್ ಮತ್ತು ಫ್ರಕ್ಟೋಸ್‌ನಂತಹ ನೈಸರ್ಗಿಕ ಸಕ್ಕರೆಗಳನ್ನು ಹೊಂದಿರುತ್ತದೆ. ಇವುಗಳ ಸೇವನೆಯಿಂದ ತ್ವರಿತ ಶಕ್ತಿ ದೊರೆಯುತ್ತದೆ. ಬೆಳಿಗ್ಗೆ 2 ರಿಂದ 3 ಖರ್ಜೂರ ತಿನ್ನುವುದರಿಂದ ಆಯಾಸ ಕಡಿಮೆಯಾಗುತ್ತದೆ. ಅಷ್ಟೇಅಲ್ಲ, ಖರ್ಜೂರವು ಕಬ್ಬಿಣದ ಅಂಶದಿಂದ ಸಮೃದ್ಧವಾಗಿದ್ದು ಚಳಿಗಾಲದ ದೌರ್ಬಲ್ಯ ಮತ್ತು ಹಿಮೋಗ್ಲೋಬಿನ್ ಕೊರತೆಯನ್ನು ತಡೆಯುತ್ತದೆ. ಇವುಗಳಲ್ಲಿರುವ ನಾರಿನ ಅಂಶವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯ ಸಮಸ್ಯೆಯಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಇದಲ್ಲದೆ, ಖರ್ಜೂರವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆದರೆ ಈ ಪ್ರಯೋಜನಗಳನ್ನು ಮಿತವಾಗಿ ಸೇವಿಸುವ ಮೂಲಕ ಪಡೆಯಬಹುದು.

ಬಾದಾಮಿ ತಿನ್ನುವುದರ ಪ್ರಯೋಜನಗಳು:

ಬಾದಾಮಿ ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುವುದಿಲ್ಲ. ಆದರೆ ದೀರ್ಘಕಾಲದವರೆಗೆ ನಿರಂತರ ಶಕ್ತಿ ಒದಗಿಸಲು ಸಹಾಯ ಮಾಡುತ್ತವೆ. ಅವುಗಳಲ್ಲಿರುವ ಆರೋಗ್ಯಕರ ಕೊಬ್ಬು, ಪ್ರೋಟೀನ್ ಮತ್ತು ಫೈಬರ್ ಅಂಶ ಚಳಿಗಾಲದಲ್ಲಿ ದೇಹವನ್ನು ಬಲವಾಗಿ ಮತ್ತು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಬಾದಾಮಿಯಲ್ಲಿ ವಿಟಮಿನ್ ಇ ಸಮೃದ್ಧವಾಗಿದೆ, ಇದು ಶೀತ ವಾತಾವರಣದಲ್ಲಿ ಒಣ ಚರ್ಮದಿಂದ ಮುಕ್ತಿ ಪಡೆಯಲು ಸಹಾಯ ಮಾಡುತ್ತದೆ. ಜೊತೆಗೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ಅಷ್ಟೇಅಲ್ಲ, ಬಾದಾಮಿ ಮೆದುಳಿನ ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಇದನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿ ಬೆಳಿಗ್ಗೆ ತಿನ್ನುವುದರಿಂದ ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಖರ್ಜೂರ, ಬಾದಾಮಿ: ಚಳಿಗಾಲಕ್ಕೆ ಯಾವುದು ಒಳ್ಳೆಯದು?

ಚಳಿಗಾಲದಲ್ಲಿ ಖರ್ಜೂರ ಮತ್ತು ಬಾದಾಮಿ ಎರಡೂ ಕೂಡ ಆರೋಗ್ಯಕರ. ಶೀತ ಅಥವಾ ದಣಿದಿದ್ದವರಿಗೆ ಖರ್ಜೂರದ ಸೇವನೆ ಉತ್ತಮ ಏಕೆಂದರೆ ಅವು ತಕ್ಷಣಕ್ಕೆ ಶಕ್ತಿ ಮತ್ತು ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಆದರೆ ದೀರ್ಘಕಾಲೀನ ಶಕ್ತಿ, ರೋಗನಿರೋಧಕ ಶಕ್ತಿ ಮತ್ತು ಒಟ್ಟಾರೆ ಆರೋಗ್ಯ ಕಾಪಾಡಿಕೊಳ್ಳಲು, ಬಾದಾಮಿ ಹೆಚ್ಚು ಪ್ರಯೋಜನಕಾರಿಯಾಗಿದೆ. ಆಹಾರದಲ್ಲಿ ಎರಡನ್ನೂ ಸೇರಿಸಿಕೊಳ್ಳುವುದು ಒಳ್ಳೆಯದು. ರೋಗನಿರೋಧಕ ಶಕ್ತಿ ಮತ್ತು ಶಕ್ತಿಯನ್ನು ಹೆಚ್ಚಿಸಲು, ಬೆಳಿಗ್ಗೆ 10-12 ನೆನೆಸಿದ ಬಾದಾಮಿ ತಿನ್ನುವುದು ಒಳ್ಳೆಯದು.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft