Health +

ಡೆಲಿವರಿ ನಂತರ ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಾದ 5 ಆರೋಗ್ಯ ಸಮಸ್ಯೆಗಳು ಯಾವುದು ಗೊತ್ತಾ?

ಹೆರಿಗೆಯ ನಂತರ ಮಹಿಳೆಯರಿಗೆ ಹಲವಾರು ರೀತಿಯ ಕಾಯಿಲೆಗಳು ಕಂಡುಬರಬಹುದು. ಹಾಗಾಗಿ ಅಂತಹ ಸಮಯದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಅದು ಕಡಿಮೆಯಾಗುತ್ತದೆ. ಹಾಗಾಗಿ ಆದಷ್ಟು ಎಚ್ಚರಿಕೆ ವಹಿಸುವುದು ಬಹಳ ಅನಿವಾರ್ಯ. ಅದರ ಜೊತೆಗೆ ಯಾವ ರೀತಿಯ ಸಮಸ್ಯೆಗಳು ಕಂಡುಬರುತ್ತದೆ ಅದನ್ನು ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆಯೂ ತಿಳಿದುಕೊಂಡಿರಬೇಕಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

ಡೆಲಿವರಿ ನಂತರ ಮಹಿಳೆಯರಲ್ಲಿ ಕಾಣಿಸಿಕೊಳ್ಳಬಹುದಾದ 5 ಆರೋಗ್ಯ ಸಮಸ್ಯೆಗಳು ಯಾವುದು ಗೊತ್ತಾ?

ಗರ್ಭಧಾರಣೆ ಎನ್ನುವಂತದ್ದು ಒಂದು ಹೆಣ್ಣಿನ ಜೀವನದಲ್ಲಿ ಮುಖ್ಯವಾದ ಘಟ್ಟ. ಈ ಅವಧಿಯಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನ ವಹಿಸುವುದು ಅತ್ಯಂತ ಮುಖ್ಯ. ಜೊತೆಗೆ ಅದಕ್ಕೂ ಹೆಚ್ಚಿನ ಕಾಳಜಿ ಡೆಲಿವರಿ (Delivery) ನಂತರ ಮಾಡಬೇಕಾಗುತ್ತದೆ. ಎಲ್ಲರಿಗೂ ತಿಳಿದಿರುವಂತೆ ಡೆಲಿವರಿ ನಂತರ ಮಹಿಳೆಯ ದೇಹದಲ್ಲಿ ಹಾರ್ಮೋನ್ ಬದಲಾವಣೆಗಳು ಮುಂದುವರಿಯುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹಾಗಾಗಿ ಆದಷ್ಟು ಎಚ್ಚರಿಕೆ ವಹಿಸುವುದು ಬಹಳ ಅನಿವಾರ್ಯ. ಅದರ ಜೊತೆಗೆ ಯಾವ ರೀತಿಯ ಸಮಸ್ಯೆಗಳು ಕಂಡುಬರುತ್ತದೆ ಅದನ್ನು ತಡೆಯಲು ಏನು ಮಾಡಬಹುದು ಎಂಬುದರ ಬಗ್ಗೆಯೂ ತಿಳಿದುಕೊಂಡಿರಬೇಕಾಗುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ಸ್ಟೋರಿಯಲ್ಲಿದೆ.

1. ಪೋಸ್ಟ್‌ಪಾರ್ಟಮ್ ಥೈರಾಯ್ಡ್ ಸಮಸ್ಯೆ

ಡೆಲಿವರಿ ನಂತರ ಕೆಲವು ಮಹಿಳೆಯರಲ್ಲಿ ಥೈರಾಯ್ಡ್ ಅಸಮತೋಲನ ಕಾಣಬಹುದು. ಇದನ್ನು “ಪೋಸ್ಟ್‌ಪಾರ್ಟಮ್ ಥೈರಾಯಿಡಿಟಿಸ್” ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿ ದಣಿವು, ಮೂಡ್ ಸ್ವಿಂಗ್, ತೂಕ ಏರಿಕೆ ಅಥವಾ ಕಡಿಮೆಯಾಗುವಂತಹ ಲಕ್ಷಣಗಳು ಕಾಣಿಸಿಕೊಳ್ಳಬಹುದು. ಹಾಗಾಗಿ ಡೆಲಿವರಿ ಬಳಿಕ ನಿಯಮಿತವಾಗಿ ಥೈರಾಯ್ಡ್ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ.

2. ಬೆನ್ನು ಮತ್ತು ಸಂಧಿ ನೋವು

ಗರ್ಭಾವಸ್ಥೆಯಲ್ಲಿ ತೂಕ ಹೆಚ್ಚಾಗುವುದು ಮತ್ತು ದೇಹದ ಸ್ಥಿತಿ ಬದಲಾಗುವುದರಿಂದ ಡೆಲಿವರಿಯ ನಂತರವೂ ಬೆನ್ನು ಮತ್ತು ಸಂಧಿಗಳ ನೋವು ಕಂಡುಬರಬಹುದು. ಜೊತೆಗೆ ಮಗುವನ್ನು ರಾತ್ರಿ ಪೂರ್ತಿ ಎತ್ತಿಕೊಳ್ಳುವುದು, ಸರಿಯಾದ ನಿದ್ರೆ ಇಲ್ಲದಿರುವುದು ಈ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ.

3. ಪೋಸ್ಟ್‌ಪಾರ್ಟಮ್ ಡಿಪ್ರೆಷನ್

ಇತ್ತೀಚಿನ ದಿನಗಳಲ್ಲಿ ಡಿಲಿವರಿ ನಂತರ ಮಹಿಳೆಯರಲ್ಲಿ ಮಾನಸಿಕ ಒತ್ತಡ ಹೆಚ್ಚುತ್ತಿದೆ. ಆತಂಕ, ಚಡಪಡಿಕೆ, ದುಃಖಭಾವ ಇವು ಇದರ ಲಕ್ಷಣಗಳಾಗಿವೆ. ಸಮರ್ಪಕ ಆರೈಕೆ ಮತ್ತು ಕುಟುಂಬದ ಬೆಂಬಲ ಇಲ್ಲದಿದ್ದರೆ ಈ ಸಮಸ್ಯೆ ಮತ್ತಷ್ಟು ಗಂಭೀರವಾಗಬಹುದು.

4. ಮಧುಮೇಹದ ಅಪಾಯ

ಗರ್ಭಾವಸ್ಥೆಯಲ್ಲಿದ್ದ ಗರ್ಭಧಾರಣಾ ಮಧುಮೇಹ (Gestational Diabetes) ನಂತರವೂ ಮುಂದುವರೆಯಬಹುದು. ಕೆಲವು ಮಹಿಳೆಯರಲ್ಲಿ ಟೈಪ್- 2 ಮಧುಮೇಹದ ಅಪಾಯ ಹೆಚ್ಚಾಗಿರುತ್ತದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು ಮತ್ತು ತೂಕ ಹೆಚ್ಚಾಗುವುದರಿಂದ ಈ ರೀತಿಯ ಸಮಸ್ಯೆ ಉಂಟಾಗಬಹುದು.

5. ಮೂತ್ರ ನಿಯಂತ್ರಣ ಸಮಸ್ಯೆ

ಪೆಲ್ವಿಕ್ ಸ್ನಾಯುಗಳು ದುರ್ಬಲವಾಗುವುದರಿಂದ ಕೆಲವು ಮಹಿಳೆಯರಲ್ಲಿ ಮೂತ್ರ ನಿಯಂತ್ರಣ ಸಮಸ್ಯೆ ಕಾಣಬಹುದು. ಇದು ಸಾಮಾನ್ಯವಾಗಿದ್ದರೂ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ. ಹಾಗಾಗಿ ಈ ಬಗ್ಗೆ ಹೆಚ್ಚಿನ ಗಮನ ನೀಡುವುದು ಅಗತ್ಯ.

ಡಿಲಿವರಿ ನಂತರ ಸರಿಯಾದ ಆಹಾರ, ವಿಶ್ರಾಂತಿ, ವ್ಯಾಯಾಮ ಮತ್ತು ವೈದ್ಯಕೀಯ ತಪಾಸಣೆ ಮೂಲಕ ಈ ಸಮಸ್ಯೆಗಳನ್ನು ನಿಯಂತ್ರಿಸಬಹುದು. ಮಹಿಳೆಯರ ಆರೋಗ್ಯವೇ ಕುಟುಂಬದ ಆರೋಗ್ಯಕ್ಕೆ ಆಧಾರವಾಗಿರುವುದರಿಂದ ಇದನ್ನು ನಿರ್ಲಕ್ಷ್ಯ ಮಾಡಬಾರದು.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft