ಕನ್ನಡ ರಾಜ್ಯೋತ್ಸವ : ಈ ಬಾರಿಯ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಬಳ್ಳಾರಿ ಜಿಲ್ಲಾಡಳಿತವು ಜಿಲ್ಲಾದ್ಯಂತ ಹೊಸ ಆದೇಶವನ್ನು ಕಟ್ಟುನಿಟ್ಟಾಗಿ ಹೊರಡಿಸಿದೆ. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನವೆಂಬರ್ 1ರಿಂದ 7ರವರೆಗೆ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ಕನ್ನಡ ಸಿನಿಮಾಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ಆದೇಶಿಸಿದೆ. ನಿರ್ದೇಶನ ಪಾಲಿಸದ ಹಾಲ್‌ಗಳಿಗೆ ಪರವಾನಿಗೆ ನವೀಕರಣ ನೀಡುವುದಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್. ಝುಬೇರ್ ಎಚ್ಚರಿಸಿದ್ದಾರೆ.
ಅದರ ಜೊತೆಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಕಡ್ಡಾಯವಾಗಿ ದೀಪಾಲಂಕಾರ ಮಾಡಬೇಕೆಂಬ ನಿರ್ದೇಶನವನ್ನೂ ನೀಡಿದ್ದಾರೆ.




