Sports

ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡಲು ಕೆಕೆಆರ್‌ಗೆ ಬಿಸಿಸಿಐ ಸೂಚನೆ!

ಮುಂಬೈ: ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಪ್ರಸ್ತುತ ರಾಜತಾಂತ್ರಿಕ ಮತ್ತು ಭದ್ರತಾ ವಿದ್ಯಮಾನಗಳನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಮಹತ್ವದ ಸೂಚನೆಯೊಂದನ್ನು ನೀಡಿದೆ.

ಬಾಂಗ್ಲಾದೇಶದ ಎಡಗೈ ವೇಗದ ಬೌಲರ್ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಕ್ಷಣವೇ ತಂಡದಿಂದ ಬಿಡುಗಡೆ ಮಾಡುವಂತೆ ಬಿಸಿಸಿಐ ಶನಿವಾರ ಖಡಕ್ ಆದೇಶ ಹೊರಡಿಸಿದೆ.

ಇತ್ತೀಚೆಗೆ ನಡೆದ ಐಪಿಎಲ್ 2026ರ ಮೆಗಾ ಹರಾಜಿನಲ್ಲಿ ಕೆಕೆಆರ್ ತಂಡವು ಮುಸ್ತಾಫಿಜುರ್ ರೆಹಮಾನ್ ಅವರನ್ನು 9.20 ಕೋಟಿ ರೂ.ಗಳ ಭಾರಿ ಮೊತ್ತಕ್ಕೆ ಖರೀದಿಸಿತ್ತು. ಆದರೆ, ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಆಟಗಾರರ ಸುರಕ್ಷತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ನಿರ್ಧಾರದಿಂದಾಗಿ ಕೆಕೆಆರ್ ತಂಡವು ಮುಂಬರುವ ಸೀಸನ್‌ಗೆ ತನ್ನ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾದ ಅನಿವಾರ್ಯತೆಗೆ ಸಿಲುಕಿದೆ. ರೆಹಮಾನ್ ಬದಲಿಗೆ ತಂಡಕ್ಕೆ ಸೇರ್ಪಡೆಗೊಳ್ಳುವ ಹೊಸ ಆಟಗಾರನ ಬಗ್ಗೆ ಕೆಕೆಆರ್ ಮ್ಯಾನೇಜ್‌ಮೆಂಟ್ ಶೀಘ್ರದಲ್ಲೇ ಅಧಿಕೃತ ಮಾಹಿತಿ ನೀಡುವ ಸಾಧ್ಯತೆಯಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft