
ಬೆಂಗಳೂರು, ಫೆಬ್ರವರಿ 02, 2026: ನಗರದ ಅರಮನೆ ಮೈದಾನದಲ್ಲಿ ನಿನ್ನೆ ಜರುಗಿದ ಅದ್ದೂರಿ ‘ಬ್ಯಾರಿ ಕೂಟ – 2026’ ಸಾಂಸ್ಕೃತಿಕ ಸಮಾವೇಶದಲ್ಲಿ, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಬಿಸಿಸಿ ಹಾಗೂ ಪ್ರಖ್ಯಾತ ಇ-ಕಾಮರ್ಸ್ ಮತ್ತು ರೀಟೇಲ್ ಸಂಸ್ಥೆ ‘ಡ್ರೀಮ್ ಡೀಲ್’ ವತಿಯಿಂದ ವಿಶೇಷ ಸನ್ಮಾನವನ್ನು ಮಾಡಲಾಯಿತು. ಬ್ಯಾರೀಸ್ ಸೆಂಟ್ರಲ್ ಕಮಿಟಿ ಆಯೋಜಿಸಿದ್ದ ಈ ಕಾರ್ಯಕ್ರಮವು ಸಮುದಾಯದ ಏಕತೆ ಮತ್ತು ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದೆ.
ವಿಧಾನಸಭಾ ಸ್ಪೀಕರ್ ಶ್ರೀ ಯು.ಟಿ. ಖಾದರ್ , ಸಚಿವ ದಿನೇಶ್ ಗುಂಡೂರಾವ್ ಮತ್ತು ಇತರ ಗಣ್ಯರ ಉಪಸ್ಥಿತಿಯಲ್ಲಿ ನಡೆದ ಈ ಸನ್ಮಾನ ಸಮಾರಂಭದಲ್ಲಿ, ಬಿಸಿಸಿ ಹಿತೈಷಿಗಳು, ಡ್ರೀಮ್ ಡೀಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸಂಸ್ಥೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಮುಖ್ಯಮಂತ್ರಿಗಳ ಜನಪರ ಆಡಳಿತ ಮತ್ತು ಸಾಮಾಜಿಕ ಕಳಕಳಿಯನ್ನು ಗೌರವಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಯು.ಟಿ. ಖಾದರ್ ಅವರು ಡ್ರೀಮ್ ಡೀಲ್ ಸಂಸ್ಥೆಯು ಬೆಳೆದು ಬಂದ ಹಾದಿ ಮತ್ತು ಅದರ ಸಾಮಾಜಿಕ ಬದ್ಧತೆಯನ್ನು ಶ್ಲಾಘಿಸಿದ್ದಾರೆ.
ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಗುಣಮಟ್ಟದ ಎಲೆಕ್ಟ್ರಾನಿಕ್ಸ್, ಪೀಠೋಪಕರಣ ಹಾಗೂ ಆಭರಣಗಳನ್ನು ಒದಗಿಸುವ ಮೂಲಕ ಕರ್ನಾಟಕದಾದ್ಯಂತ ಹೆಸರು ಮಾಡಿರುವ ‘ಡ್ರೀಮ್ ಡೀಲ್’ ಇ-ಕಾಮರ್ಸ್ ಕಂಪನಿಯು, ಈ ಬೃಹತ್ ಸಮಾವೇಶದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿತ್ತು. ಮುಖ್ಯಮಂತ್ರಿಗಳಿಗೆ ಗೌರವ ಸಲ್ಲಿಸುವ ಮೂಲಕ ಸಂಸ್ಥೆಯು ತನ್ನ ಸಾಮಾಜಿಕ ಜವಾಬ್ದಾರಿಯನ್ನು ಪ್ರದರ್ಶಿಸಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಹಸ್ರಾರು ಜನರ ಸಮ್ಮುಖದಲ್ಲಿ ನಡೆದ ಈ ಸನ್ಮಾನವು ಡ್ರೀಮ್ ಡೀಲ್ ತಂಡಕ್ಕೆ ಹೊಸ ಉತ್ಸಾಹವನ್ನು ನೀಡಿದೆ.
ಬ್ಯಾರಿ ಸಮುದಾಯದ ಪ್ರಗತಿ ಮತ್ತು ಸೌಹಾರ್ದತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಡೆದ ಈ ‘ಬ್ಯಾರಿ ಕೂಟ – 2026’ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಡ್ರೀಮ್ ಡೀಲ್ ಕಂಪೆನಿಯ ವತಿಯಿಂದ ಮುಖ್ಯಮಂತ್ರಿಗಳಿಗೆ ನೀಡಲಾದ ಗೌರವವು ಸಮುದಾಯ ಮತ್ತು ಉದ್ಯಮ ಕ್ಷೇತ್ರದ ನಡುವಿನ ಉತ್ತಮ ಬಾಂಧವ್ಯಕ್ಕೆ ಸಂಕೇತವಾಗಿ ಮೂಡಿಬಂದಿದೆ. ಡ್ರೀಮ್ ಡೀಲ್ ಸಂಸ್ಥೆಯ ಸಿಬ್ಬಂದಿಗಳು ಹಾಗೂ ಬ್ಯಾರಿ ಬಾಂಧವರು ಈ ಐತಿಹಾಸಿಕ ಕ್ಷಣದಲ್ಲಿ ಸಂಭ್ರಮಿಸಿ ಕಂಪನಿಯ ಏಳಿಗೆಯನ್ನು ಅಭಿನಂದಿಸಿದ್ದಾರೆ.



