News

ಆನ್‌ಲೈನ್‌ ಗೇಮಿಂಗ್‌ ಮಸೂದೆ ಪಾಸ್‌ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್‌!

ನವದೆಹಲಿ: ಲೋಕಸಭೆಯಲ್ಲಿ ಆನ್‌ಲೈನ್‌ ಗೇಮಿಂಗ್‌ ಮಸೂದೆ (Online Gaming Bill, 2025) ಅಂಗೀಕಾರವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಈ ಮಸೂದೆಯನ್ನು ಸರ್ಕಾರ ಧ್ವನಿ ಮತದಿಂದ ಪಾಸ್‌ ಮಾಡಿಸುವಲ್ಲಿ ಯಶಸ್ವಿಯಾಗಿದೆ.

ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡಿಸಿದರು. ಈ ಆಟಗಳಲ್ಲಿ ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆಯ ಘಟನೆಗಳನ್ನು ತಡೆಯಲು ಮಸೂದೆ ಮಂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಈ ಮಸೂದೆಯು ಇ-ಸ್ಪೋರ್ಟ್ಸ್ ಮತ್ತು ಆನ್‌ ಲೈನ್ ಸಾಮಾಜಿಕ ಆಟಗಳನ್ನು ಪ್ರೋತ್ಸಾಹಿಸುತ್ತದೆ. ಆದರೆ ಹಾನಿಕಾರಕ ಆನ್‌ಲೈನ್ ಹಣದ ಗೇಮಿಂಗ್ ಸೇವೆಗಳು, ಅವುಗಳ ಜಾಹೀರಾತುಗಳು ಮತ್ತು ಹಣಕಾಸು ವ್ಯವಹಾರಗಳನ್ನು ನಿಷೇಧಿಸುತ್ತದೆ. ಆನ್‌ ಲೈನ್ ಫ್ಯಾಂಟಸಿ ಸ್ಪೋರ್ಟ್ಸ್‌ನಿಂದ ಹಿಡಿದು ಆನ್‌ ಲೈನ್ ಜೂಜು (ಪೋಕರ್, ರಮ್ಮಿ ಮತ್ತು ಇತರ ಕಾರ್ಡ್ ಆಟಗಳು) ಹಾಗೂ ಆನ್‌ ಲೈನ್ ಲಾಟರಿಗಳವರೆಗೆ ಎಲ್ಲಾ ಆನ್‌ ಲೈನ್ ಬೆಟ್ಟಿಂಗ್ ಮತ್ತು ಜೂಜಿನ ಚಟುವಟಿಕೆಗಳನ್ನು ಈ ಮಸೂದೆ ಕಾನೂನುಬಾಹಿರಗೊಳಿಸುತ್ತದೆ.

ಹಣವನ್ನು ಮರುಪಾವತಿ ಮಾಡುತ್ತೇವೆ ಎಂದು ಭರವಸೆ ನೀಡಿ ಕುಟುಂಬದ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗುವ ಈ ಗೇಮಿಂಗ್‌ ಆಟಗಳಿಂದ ಭಾರತದ ಯುವಕರನ್ನು ರಕ್ಷಿಸಲು ಈ ಮಸೂದೆಯನ್ನು ಸಿದ್ಧಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು

ಶಿಕ್ಷೆ ಏನು?
ಅಕ್ರಮ ಹಣದ ಗೇಮಿಂಗ್ ಮಾಡಿದ್ದು ಸಾಬೀತಾದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು / ಅಥವಾ 1 ಕೋಟಿ ರೂ.ವರೆಗೆ ದಂಡವನ್ನು ಎದುರಿಸಬೇಕಾಗುತ್ತದೆ. ಆನ್‌ಲೈನ್‌ ಗೇಮ್‌ಗಳಿಗೆ ಜಾಹೀರಾತು ಮಾಡಿದವರಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು / ಅಥವಾ 50 ಲಕ್ಷ ರೂ.ವರೆಗೆ ದಂಡವನ್ನು ವಿಧಿಸಬಹುದು. ಸಂಬಂಧಿತ ವಹಿವಾಟುಗಳಲ್ಲಿ ಭಾಗಿಯಾಗಿರುವ ಹಣಕಾಸು ಸಂಸ್ಥೆಗಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು/ ಅಥವಾ 1 ಕೋಟಿ ರೂ.ವರೆಗೆ ದಂಡವನ್ನು ಎದುರಿಸಬೇಕಾಗುತ್ತದೆ.

ಒಂದು ವೇಳೆ ಮತ್ತೊಮ್ಮೆ ಈ ಅಪರಾಧ ಎಸಗಿದ್ದಲ್ಲಿ ದೀರ್ಘಾವಧಿಯ ಜೈಲು ಶಿಕ್ಷೆ ಮತ್ತು ಹೆಚ್ಚಿನ ದಂಡ ಸೇರಿದಂತೆ ಕಠಿಣ ಶಿಕ್ಷೆಗಳನ್ನು ಎದುರಿಸಬೇಕಾಗುತ್ತದೆ.

ಈ ಅಪರಾಧ ಎಸಗಿದ್ದಲ್ಲಿ ಜಾಮೀನು ಸಿಗುವುದಿಲ್ಲ. ಶಂಕಿತ ಪ್ರಕರಣಗಳಲ್ಲಿ ತನಿಖೆ ಮಾಡಲು, ಶೋಧಿಸಲು ಮತ್ತು ಆಸ್ತಿಯನ್ನು ವಶಪಡಿಸಿಕೊಳ್ಳಲು ಮತ್ತು ವಾರಂಟ್ ಇಲ್ಲದೆ ಬಂಧಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಲಾಗುತ್ತದೆ.

ಈ ಅಪರಾಧ ಎಸಗಿದ್ದಲ್ಲಿ ಜಾಮೀನು ಸಿಗುವುದಿಲ್ಲ. ಶಂಕಿತ ಪ್ರಕರಣಗಳಲ್ಲಿ ತನಿಖೆ ಮಾಡಲು, ಶೋಧಿಸಲು ಮತ್ತು ಆಸ್ತಿಯನ್ನು ವಶಪಡಿಸಿಕೊಳ್ಳಲು ಮತ್ತು ವಾರಂಟ್ ಇಲ್ಲದೆ ಬಂಧಿಸಲು ಅಧಿಕಾರಿಗಳಿಗೆ ಅಧಿಕಾರ ನೀಡಲಾಗುತ್ತದೆ.

Irshad

About Author

Leave a Reply

Your email address will not be published. Required fields are marked *

Get Latest Updates and big deals

    Our expertise, as well as our passion for web design, sets us apart from other agencies.

    Dream Times @2025. All Rights Reserved. Powered By Exalt Techsoft