ಬಿಸಿಲ ತಾಪದಿಂದ ರಕ್ಷಣೆ ಪಡೆಯಲು ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ
ಬೆಂಗಳೂರು, ಮಾರ್ಚ್ 13, 2026: ರಾಜ್ಯದಾದ್ಯಂತ ದಿನೇ ದಿನೇ ಏರುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ಉಂಟಾಗಬಹುದಾದ ದುಷ್ಪರಿಣಾಮಗಳನ್ನು ತಡೆಗಟ್ಟಲು ಆರೋಗ್ಯ ಇಲಾಖೆಯು ವಿಶೇಷ ಆರೋಗ್ಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಪ್ರಸ್ತುತ ಹಲವು ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗುತ್ತಿದ್ದು, ಹೀಟ್ ಸ್ಟ್ರೋಕ್ (ಬಿಸಿಲ ಘಾತ) ಮತ್ತು ನಿರ್ಜಲೀಕರಣದಂತಹ ಸಮಸ್ಯೆಗಳಿಂದ ಪಾರಾಗಲು ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ ಎಂದು ಇಲಾಖೆ ತಿಳಿಸಿದೆ. ಬಿಸಿಲಿನಿಂದ ರಕ್ಷಿಸಿಕೊಳ್ಳಲು ಸಾರ್ವಜನಿಕರು ಮುಖ್ಯವಾಗಿ ದೇಹದಲ್ಲಿ ನೀರಿನಂಶ ಕಡಿಮೆಯಾಗದಂತೆ ನೋಡಿಕೊಳ್ಳಬೇಕು. ಬಾಯಾರಿಕೆ ಇಲ್ಲದಿದ್ದರೂ ನಿಯಮಿತವಾಗಿ […]


