ಆನ್‌ಲೈನ್ ಗೇಮಿಂಗ್ ಮಸೂದೆ ಪಾಸ್ – ಪ್ರಚಾರ ಮಾಡಿದ್ರೂ ಜೈಲು ಶಿಕ್ಷೆ ಫಿಕ್ಸ್!
ನವದೆಹಲಿ: ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಮಸೂದೆ (Online Gaming Bill, 2025) ಅಂಗೀಕಾರವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಈ ಮಸೂದೆಯನ್ನು ಸರ್ಕಾರ ಧ್ವನಿ ಮತದಿಂದ ಪಾಸ್ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಮಾಹಿತಿ ತಂತ್ರಜ್ಞಾನ ಖಾತೆಯ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಲೋಕಸಭೆಯಲ್ಲಿ ಆನ್‌ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡಿಸಿದರು. ಈ ಆಟಗಳಲ್ಲಿ ಹೆಚ್ಚುತ್ತಿರುವ ವ್ಯಸನ, ಹಣ ವರ್ಗಾವಣೆ ಮತ್ತು ಆರ್ಥಿಕ ವಂಚನೆಯ ಘಟನೆಗಳನ್ನು ತಡೆಯಲು ಮಸೂದೆ ಮಂಡಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಮಸೂದೆಯು […]











