News

“ಸಚಿವ ಸ್ಥಾನ ದೊರಕದಿರುವುದು ನೋವು ಮತ್ತು ಅಸಮಾಧಾನ ಉಂಟು ಮಾಡಿದೆ. ಆದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವದಂತಿ ಸುಳ್ಳು” – ಶಾಸಕ ಬಿ. ಆರ್. ಪಾಟೀಲ್ ಸ್ಪಷ್ಟನೆ

ಬೆಂಗಳೂರು, 5 ಆಗಸ್ಟ್ 2026: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿಗಳು ಸಂಪೂರ್ಣ ಸುಳ್ಳು ಮತ್ತು ದಾರಿತಪ್ಪಿಸುವಂತದ್ದು ಎಂದು ಮಾಜಿ ಸಚಿವ ಹಾಗೂ ಶಾಸಕ ಬಿ. ಆರ್. ಪಾಟೀಲ್ ಅವರು ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ರೀತಿಯ ಅಪಪ್ರಚಾರ ನಡೆಯುತ್ತಿದ್ದು, ಸಾರ್ವಜನಿಕರು ಹಾಗೂ ಬೆಂಬಲಿಗರು ಇಂತಹ ಯಾವುದೇ ವದಂತಿಗಳನ್ನು ನಂಬಬಾರದು ಎಂದು ಅವರು ಕೋರಿದ್ದಾರೆ.ದಿನಾಂಕ 05.06.2026ರಂದು ತಾವು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ […]

News

ಥರ್ಡ್ ಪಾರ್ಟಿ ವಿಮೆ (ಇನ್ಶೂರೆನ್ಸ್) ಇಲ್ಲದ ವಾಹನಗಳಿಗೆ ಪೆಟ್ರೋಲ್-ಡೀಸೆಲ್ ಬಂದ್: ಹೊಸ ನಿಯಮ ರೂಪಿಸಲು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

ಹೊಸದೆಹಲಿ, ಆಗಸ್ಟ್ ೦೫: ದೇಶದಲ್ಲಿ ʼಥರ್ಡ್ ಪಾರ್ಟಿʼ (ಮೂರನೇ ವ್ಯಕ್ತಿ) ವಿಮೆ ಇಲ್ಲದೆ ಚಲಿಸುವ ವಾಹನಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿರುವುದಕ್ಕೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ವಿಮೆ ಹೊಂದಿರದ ವಾಹನಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳುವವರೆಗೆ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ (ಪೆಟ್ರೋಲ್/ಡೀಸೆಲ್) ನೀಡದಂತೆ ತಡೆಯುವ ಪ್ರಾಯೋಗಿಕ ಯೋಜನೆಯೊಂದನ್ನು (ಪೈಲಟ್ ಪ್ರಾಜೆಕ್ಟ್) ತಕ್ಷಣವೇ ರೂಪಿಸಬೇಕೆಂದು ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರಿದ್ದ ಪೀಠವು ಕೇಂದ್ರ ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.ಹಣಕಾಸು ಸ್ಥಾಯಿ ಸಮಿತಿಯ 2024–25ರ […]

News Sports

ರೋಹಿತ್ ಶರ್ಮಾ ವಿವಾದ – ಆಯ್ಕೆ ಸಮಿತಿ ಮುಖ್ಯಸ್ಥ ಸ್ಥಾನದಿಂದ ಅಜಿತ್ ಅಗರ್ಕರ್‌ಗೆ ಕೊಕ್? ವಿ.ವಿ.ಎಸ್. ಲಕ್ಷ್ಮಣ್ ನೇಮಕ ಸಾಧ್ಯತೆ

ಹೊಸದಿಲ್ಲಿ, ಆಗಸ್ಟ್ 05, 2026: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರ ರೋಹಿತ್ ಶರ್ಮಾ ಅವರ ಏಕದಿನ ಕ್ರಿಕೆಟ್ ಭವಿಷ್ಯ ಕುರಿತಾದ ವಿವಾದ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರನ್ನು ಹುದ್ದೆಯಿಂದ ತೆರವುಗೊಳಿಸಲು ಚಿಂತನೆ ನಡೆಸಿದೆ. ಅಗರ್ಕರ್ ಅವರ ಒಪ್ಪಂದದ ವಿಸ್ತರಣೆ ಅವಧಿಯು ಮುಂದಿನ ಒಂದು ತಿಂಗಳಲ್ಲಿ ಮುಕ್ತಾಯಗೊಳ್ಳಲಿದ್ದು, ಅವರ ಸ್ಥಾನಕ್ಕೆ ಪ್ರಸ್ತುತ ಬೆಂಗಳೂರಿನ ‘ಸೆಂಟರ್ ಆಫ್ ಎಕ್ಸಲೆನ್ಸ್’ ಮುಖ್ಯಸ್ಥರಾಗಿರುವ ಮಾಜಿ ಕ್ರಿಕೆಟಿಗ ವಿ.ವಿ.ಎಸ್. ಲಕ್ಷ್ಮಣ್ ಅವರನ್ನು […]

News Technology

ಪ್ರಧಾನಿ ಮೋದಿ ವೀಡಿಯೋ ತಡೆಹಿಡಿದಿದ್ದಕ್ಕೆ ಕ್ಷಮೆಯಾಚಿಸಲು , ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್‌ಗೆ 3 ದಿನಗಳ ಗಡುವು ನೀಡಿದ ಸಂಸದೀಯ ಸಮಿತಿ

ಬೆಂಗಳೂರು, 05 ಆಗಸ್ಟ್ 2026: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೇಸ್‌ಬುಕ್ ವೀಡಿಯೋವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಅವರು ಮೂರು ದಿನಗಳ ಒಳಗೆ ಬೇಷರತ್ ಕ್ಷಮೆಯಾಚಿಸಬೇಕು ಎಂದು ಸಂಸದೀಯ ಸ್ಥಾಯಿ ಸಮಿತಿಯು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ವಿಷಯದ ಸಂಸದೀಯ ಸಮಿತಿಯು ಲೋಕಸಭಾ ಸಚಿವಾಲಯದ ಮೂಲಕ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯಕ್ಕೆ ಪತ್ರ ಬರೆದಿದ್ದು, ಜುಕರ್‌ಬರ್ಗ್ ಅವರು ನಿಗದಿತ ಸಮಯದೊಳಗೆ ಕ್ಷಮೆಯಾಚಿಸದಿದ್ದರೆ ಸಂಸ್ಥೆಗೆ ನೀಡಲಾಗಿರುವ ಕಾನೂನು ರಕ್ಷಣೆ […]

Sports

ಗ್ಲ್ಯಾಸ್ಗೋ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾಗವಹಿಸಿದ್ದ ಪಾಕಿಸ್ತಾನದ ಬಾಕ್ಸರ್ ಗ್ಲಾಸ್ಗೊದಲ್ಲಿ ನಾಪತ್ತೆ! ಕಳೆದ ಇಟಲಿ ಟೂರ್ನಿಯಲ್ಲಿಯೂ ಇದೇ ರೀತಿ ಪಾಕಿಸ್ತಾನದ ಇನ್ನೋರ್ವ ಬಾಕ್ಸರ್ ನಾಪತ್ತೆಯಾಗಿದ್ದರು ಕೂಡಾ!!

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft