ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಎಂದು ರೀಲ್ ಹಂಚಿದ ಯುವತಿ. ಮನನೊಂದ ಯುವಕ ಆತ್ಮಹತ್ಯೆ; ಸುಳ್ಳು ಆರೋಪ ಹೊರಿಸಿದ ಯುವತಿ ವಿರುದ್ಧ ಮೆನ್ಸ್ ಕಮಿಷನ್ ದೂರು
ಕೋಝಿಕ್ಕೋಡ್ : ಕೇರಳದಲ್ಲಿ ಇತ್ತೀಚೆಗೆ ನಡೆದ ದಾರುಣ ಘಟನೆಯೊಂದರಲ್ಲಿ, ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆಂಬ ಸುಳ್ಳು ಆರೋಪಕ್ಕೆ ಗುರಿಯಾದ ದೀಪಕ್ ಎಂಬ ಯುವಕ ಸಾಮಾಜಿಕ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆಯು ಈಗ ಕೇರಳದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಸತ್ಯಾಸತ್ಯತೆ ತಿಳಿಯುವ ಮೊದಲೇ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತಿಯ ಚಾರಿತ್ರ್ಯವಧೆ ಮಾಡುವ ಕುರಿತು ದೊಡ್ಡ ಮಟ್ಟದ ಚರ್ಚೆ ಆರಂಭವಾಗಿದೆ. ಘಟನೆಯ ಹಿನ್ನೆಲೆ: ಕೆಲವು ದಿನಗಳ ಹಿಂದೆ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು, ದೀಪಕ್ ಎಂಬ ಯುವಕ ತನಗೆ […]

