News

ಈಡೇರದ 3 ಬೇಡಿಕೆಗಳ ವಿರುದ್ಧ ಮತ್ತೆ ಹೋರಾಟಕ್ಕೆ CJP ಸಜ್ಜು; ಸೆ.5ರಂದು ದಿಲ್ಲಿಯಲ್ಲಿ ಪ್ರತಿಭಟನೆ

ಹೊಸದಿಲ್ಲಿ: ಸರಕಾರಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಕ್ಯಾಂಪೇನ್ ಫಾರ್ ಜಸ್ಟಿಸ್ ಅಂಡ್ ಪೀಸ್ (CJP), ತನ್ನ ಬೇಡಿಕೆಗಳು ಇನ್ನೂ ಈಡೇರದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರತಿಭಟನೆಗೆ ಮುಂದಾಗಿದೆ. ಸೆಪ್ಟೆಂಬರ್ 5ರಂದು ಹೊಸದಿಲ್ಲಿಯ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಾಗಿ ಸಂಘಟನೆ ಘೋಷಿಸಿದೆ.

ಸರಕಾರಿ ಶಾಲೆಗಳ ಅಭಿವೃದ್ಧಿ ಸೇರಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು CJP ಈ ಹಿಂದೆ ಪ್ರತಿಭಟನೆ ನಡೆಸಿತ್ತು. ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರೂ, ತಮ್ಮ ಬೇಡಿಕೆಗಳ ಕುರಿತು ಸರ್ಕಾರದಿಂದ ನಿರೀಕ್ಷಿತ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಮತ್ತೆ ಹೋರಾಟದ ಹಾದಿ ಹಿಡಿದಿದೆ.

ಸರಕಾರಿ ಶಾಲೆಗಳ ಮೂಲಸೌಕರ್ಯ ಸುಧಾರಣೆ, ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳ ಒದಗಿಸುವಿಕೆ ಸೇರಿದಂತೆ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವಂತೆ CJP ಒತ್ತಾಯಿಸುತ್ತಿದೆ. ಶಿಕ್ಷಣ ಕ್ಷೇತ್ರದ ಸಮಸ್ಯೆಗಳನ್ನು ಕಡೆಗಣಿಸದೆ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂಬುದು ಸಂಘಟನೆಯ ಪ್ರಮುಖ ಆಗ್ರಹವಾಗಿದೆ.

ಸೆಪ್ಟೆಂಬರ್ 5ರಂದು ದಿಲ್ಲಿಯಲ್ಲಿ ನಡೆಯಲಿರುವ ಪ್ರತಿಭಟನೆಯ ಮೂಲಕ ಸರ್ಕಾರದ ಗಮನವನ್ನು ಮತ್ತೊಮ್ಮೆ ಸೆಳೆಯಲು CJP ಮುಂದಾಗಿದೆ. ಬೇಡಿಕೆಗಳು ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನೂ ಸಂಘಟನೆ ನೀಡಿದೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft