News

ಸರ್ಕಾರಿ ಶಾಲೆಗಳ ದುಸ್ಥಿತಿಯ ವಿರುದ್ಧ ಬೀದಿಗಿಳಿದ ಕಾಕ್ರೋಚ್‌ಗಳು : ದೇಶದ ಹಲವು ರಾಜ್ಯಗಳಲ್ಲಿ ಪ್ರತಿಭಟನೆ

ನವದೆಹಲಿ, ಆಗಸ್ಟ್ 24: ದೇಶದ ಸರ್ಕಾರಿ ಶಾಲೆಗಳಲ್ಲಿನ ದುಸ್ಥಿತಿ ಹಾಗೂ ಮೂಲಸೌಕರ್ಯಗಳ ಕೊರತೆಯ ವಿರುದ್ಧ ‘ಕಾಕ್ರೋಚ್‌ಗಳು’ ಎಂಬ ಹೆಸರಿನಲ್ಲಿ ನಡೆಸಲಾಗುತ್ತಿರುವ ಪ್ರತಿಭಟನಾ ಅಭಿಯಾನ ದೇಶದ ಹಲವು ರಾಜ್ಯಗಳಲ್ಲಿ ಗಮನ ಸೆಳೆಯುತ್ತಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್, ಮಹಾರಾಷ್ಟ್ರ, ಒಡಿಶಾ, ಛತ್ತೀಸ್‌ಗಢ, ಪಂಜಾಬ್ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸರ್ಕಾರಿ ಶಾಲೆಗಳ ಸಮಸ್ಯೆಗಳ ಕುರಿತು ಪ್ರತಿಭಟನೆಗಳು ನಡೆದಿವೆ.

ಶಿಥಿಲಗೊಂಡ ಶಾಲಾ ಕಟ್ಟಡಗಳು, ಸೋರುವ ಛಾವಣಿಗಳು, ವಿದ್ಯುತ್ ಮತ್ತು ಫ್ಯಾನ್‌ಗಳ ಕೊರತೆ, ಮುರಿದ ಡೆಸ್ಕ್‌ಗಳು, ಅಶುದ್ಧ ಕುಡಿಯುವ ನೀರು, ಕಳಪೆ ಬಿಸಿಯೂಟ ಹಾಗೂ ಸಮರ್ಪಕ ಶೌಚಾಲಯಗಳ ಕೊರತೆಯಂತಹ ಸಮಸ್ಯೆಗಳನ್ನು ಪ್ರತಿಭಟನೆಗಳ ಮೂಲಕ ಮುನ್ನೆಲೆಗೆ ತರಲಾಗಿದೆ. ಕೆಲವು ಕಡೆಗಳಲ್ಲಿ ಶಾಲಾ ಕಟ್ಟಡ, ಶಿಕ್ಷಕರು ಹಾಗೂ ರಸ್ತೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ದೇಶದಲ್ಲಿ 14.71 ಲಕ್ಷಕ್ಕೂ ಅಧಿಕ ಶಾಲೆಗಳಿದ್ದು, ಅವುಗಳಲ್ಲಿ ಸುಮಾರು ಶೇ.69ರಷ್ಟು ಸರ್ಕಾರಿ ಶಾಲೆಗಳಾಗಿವೆ. ಕೋಟ್ಯಂತರ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳನ್ನು ಅವಲಂಬಿಸಿರುವುದಾದರೂ, ಹಲವು ಶಾಲೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಮುಂದುವರಿದಿದೆ. ವಾರ್ಷಿಕ ಶಿಕ್ಷಣ ಸ್ಥಿತಿ ವರದಿ-2024ರ ಅಂಕಿಅಂಶಗಳೂ ಸರ್ಕಾರಿ ಶಾಲೆಗಳಲ್ಲಿನ ಕಲಿಕೆಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ಕಳೆದ ಒಂದು ದಶಕದಲ್ಲಿ ಸಾವಿರಾರು ಸರ್ಕಾರಿ ಶಾಲೆಗಳು ಮುಚ್ಚಿರುವುದಾಗಿ ವರದಿಗಳು ಉಲ್ಲೇಖಿಸಿವೆ.

ಈ ಹಿನ್ನೆಲೆಯಲ್ಲಿ ‘ಸ್ಕೂಲ್ ಠೀಕ್ ಕರೋ’ ಅಭಿಯಾನ ಸೇರಿದಂತೆ ವಿವಿಧ ಪ್ರಯತ್ನಗಳು ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಸಾರ್ವಜನಿಕರ ಹಾಗೂ ಸರ್ಕಾರಗಳ ಗಮನಕ್ಕೆ ತರುವ ಪ್ರಯತ್ನ ನಡೆಸುತ್ತಿವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ ಹಾಗೂ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಸರ್ಕಾರಗಳ ಜವಾಬ್ದಾರಿಯಾಗಿದ್ದು, ಪ್ರತಿಭಟನೆಗಳ ಮೂಲಕ ಮುನ್ನೆಲೆಗೆ ಬರುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft