
ಹಲವು ದಿನಗಳಿಂದ ಸೈಕ್ಲೋನ್ ಎಫೆಕ್ಟ್ನಿಂದ ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಕರ್ನಾಟಕದ ಕೆಲ ಭಾಗದಲ್ಲೂ ಭಾರೀ ಮಳೆಯಾಗಿತ್ತು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಅಕಾಲಿಕ ಮಳೆಯಾಗಿತ್ತು. ಇದರಿಂದ ತರಕಾರಿ ಬೆಳೆ ಹಾಳಾಗಿದ್ದು, ಸರಿಯಾಗಿ ಬೆಳೆ ಬಂದಿಲ್ಲ. ಬೆಳೆದ ಬೆಳೆ ಕೈಗೆ ಬರದ ಕಾರಣ ತರಕಾರಿಗಳ ಬೆಲೆ ಗಗನಕ್ಕೇರಿದೆ.ಯಾವ ತರಕಾರಿ ಬೆಲೆ ಕೇಳಿದರೂ ಗ್ರಾಹಕರು ಕಂಗಾಲಾಗುತ್ತಿದ್ದಾರೆ. ಇದರಿಂದ ಯಾರು ತರಕಾರಿ ಕೊಳ್ಳಲು ಬರುತ್ತಿಲ್ಲ, ವ್ಯಾಪಾರ ಸರಿಯಾಗಿ ನಡೆಯದೇ ಇದ್ದರೆ ಜೀವನ ಸಾಗಿಸುವುದು ಕಷ್ಟ ಎಂದು ತರಕಾರಿ ವ್ಯಾಪಾರಿಗಳು ತನ್ನ ನೋವು ತೋಡಿಕೊಂಡಿದ್ದಾರೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೊಂತಾ ಚಂಡಮಾರುತ (Cyclone Montha) ಅಪ್ಪಳಿಸಿರುವ ಬೆನ್ನಲ್ಲೇ ಕರ್ನಾಟಕದ ಹಲವು ಜಿಲ್ಲೆಗಳು ವರುಣಾರ್ಭಟಕ್ಕೆ ತತ್ತರಿಸಿದ್ದವು. ಈ ಹಿನ್ನೆಲೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಹೆಚ್ಚಾಗಿರುವ ತರಕಾರಿ ಬೆಲೆ (Vegetable Rate) ಕೇಳಿದ ಗ್ರಾಹಕರು ಖರೀದಿ ಮಾಡಲು ಹಿಂದೇಟು ಹಾಕುತ್ತಿದ್ದರೆ ,ವ್ಯಾಪಾರಿಗಳು ವ್ಯಾಪಾರವಿಲ್ಲದೇ ಪರಿತಪಿಸುತ್ತಿದ್ದಾರೆ.



