News

“ಬಿಜೆಪಿ ಮೂಲತಃ ಬಡವರ ವಿರೋಧಿ ಸರ್ಕಾರ! ನಾವು ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳುನಿಲ್ಲುವುದಿಲ್ಲ”: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

​ಬೆಂಗಳೂರು, ಜೂನ್ ೧೫, ೨೦೨೬: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲದೆ, ಮುಂಬರುವ ಚುನಾವಣೆಯಲ್ಲಿಯೂ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಆ ನಂತರವೂ ಈ ಯೋಜನೆಗಳು ನಿರಂತರವಾಗಿ ಮುಂದುವರಿಯಲಿವೆ ಎಂದು ಅವರು ಭರವಸೆ ನೀಡಿದ್ದಾರೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡುಬರುವ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದ್ದು, ಫಲಾನುಭವಿಗಳು ವಿರೋಧ ಪಕ್ಷಗಳ ಅಪಪ್ರಚಾರಕ್ಕೆ ಕಿವಿಗೊಟ್ಟು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

​ವಿರೋಧ ಪಕ್ಷವಾದ ಬಿಜೆಪಿಯನ್ನು ಬಡವರ ವಿರೋಧಿ ಎಂದು ಟೀಕಿಸಿದ ಅವರು, ಗ್ಯಾರಂಟಿ ಯೋಜನೆಗಳ ಆರಂಭದ ದಿನದಿಂದಲೂ ಬಿಜೆಪಿ ಇದನ್ನು ವಿರೋಧಿಸುತ್ತಾ ಬಂದಿದೆ ಎಂದಿದ್ದಾರೆ. ಮೊದಲು ಯೋಜನೆಗಳ ಜಾರಿಯೇ ಅಸಾಧ್ಯ ಎಂದಿದ್ದ ಬಿಜೆಪಿ ನಾಯಕರು, ತದನಂತರ ಹಣಕಾಸಿನ ಕೊರತೆಯಿಂದ ಸರ್ಕಾರ ದಿವಾಳಿಯಾಗಲಿದೆ ಎಂದು ವಾದಿಸಿದ್ದರು. ಈಗ ಯೋಜನೆಗಳನ್ನೇ ನಿಲ್ಲಿಸಲಾಗುತ್ತಿದೆ ಎಂಬ ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದು, ಇದು ಅವರ ರಾಜಕೀಯ ಹತಾಶೆಯ ಪ್ರತೀಕವಾಗಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಪ್ರಕಟಣೆಯಲ್ಲಿ ದೂರಿದ್ದಾರೆ.

​ಐದು ಪ್ರಮುಖ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ರಾಜ್ಯದ ಆರ್ಥಿಕತೆಯ ಮೇಲೆ ಯಾವುದೇ ದುಷ್ಪರಿಣಾಮ ಬೀರದಂತೆ ಸಮರ್ಥವಾಗಿ ನಿರ್ವಹಿಸಲಾಗಿದೆ ಎಂದು ಸಿದ್ದರಾಮಯ್ಯ ವಿವರಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯವು ತಲಾವಾರು ಆದಾಯದಲ್ಲಿ ದೇಶದಲ್ಲೇ ಮೊದಲ ಸ್ಥಾನದಲ್ಲಿದ್ದು, ಜಿಎಸ್‌ಟಿ ಸಂಗ್ರಹಣೆಯಲ್ಲಿ ಮಹಾರಾಷ್ಟ್ರದ ನಂತರ ಎರಡನೇ ಸ್ಥಾನದಲ್ಲಿದೆ. ಸರ್ಕಾರದ ಖಜಾನೆ ಖಾಲಿಯಾಗಿದ್ದರೆ ಅಥವಾ ಆರ್ಥಿಕತೆ ದಿವಾಳಿಯಾಗಿದ್ದರೆ ಇಂತಹ ಐತಿಹಾಸಿಕ ಸಾಧನೆ ಮಾಡಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.

​ಇದೇ ವೇಳೆ, ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಕಟುವಾಗಿ ಟೀಕಿಸುವ ಬಿಜೆಪಿ, ಅದೇ ಯೋಜನೆಗಳನ್ನು ಮಧ್ಯಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ನಕಲು ಮಾಡಿ ಅಧಿಕಾರ ಹಿಡಿದಿದೆ ಎಂದು ಕಿಡಿಕಾರಿದ್ದಾರೆ. ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಮತ್ತು ಅನರ್ಹರ ಪಾಲಾಗುವುದನ್ನು ತಡೆಯುವುದು ಸರ್ಕಾರದ ಕರ್ತವ್ಯವಾಗಿದೆ. ಆದ್ದರಿಂದ ಸಾರ್ವಜನಿಕರು ದುರಾಸೆಗೆ ಬಲಿಯಾಗದೆ, ಕಾನೂನುಬದ್ಧವಾಗಿ ಯೋಜನೆಗಳ ಲಾಭ ಪಡೆಯುವ ಮೂಲಕ ರಾಜ್ಯದ ಅಭಿವೃದ್ಧಿಗೆ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft