News

ರಾಜ್ಯದ ಇತಿಹಾಸದಲ್ಲಿ ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ!

ಬೆಂಗಳೂರು, ಮಾ. 6 : ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.

ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಐಪಿಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ 6 ರಂದು ಬೆಳಿಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.

ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft