ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಇಂದು ಗುರುವಾರ ಇಳಿಕೆ ಕಂಡಿವೆ. ಚಿನ್ನ ಬೆಲೆ 200 ಕಡಿಮೆಯಾದರೆ, ಬೆಳ್ಳಿ ಬೆಲೆ ತೀವ್ರ ಕುಸಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,660 ರೂನಿಂದ 11,465 ರೂಗೆ ಇಳಿದಿದೆ. 24 ಕ್ಯಾರಟ್ ಚಿನ್ನದ ಬೆಲೆ 12,508 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಬೆಂಗಳೂರು, ಮುಂಬೈ ಮೊದಲಾದ ಕಡೆ 159 ರೂಗೆ ಇಳಿದಿದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 174 ರೂಗೆ ಇಳಿದಿದೆ.

ಬೆಂಗಳೂರು, ಅಕ್ಟೋಬರ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ ಮುಂದುವರಿದಿದೆ. ಹಳದಿ ಲೋಹದ ಬೆಲೆ ಗ್ರಾಮ್ಗೆ 200 ರೂಗಳಷ್ಟು ತಗ್ಗಿದೆ. ಅಪರಂಜಿ ಚಿನ್ನದ ಬೆಲೆ (gold rate) 13,000 ರೂ ಗಡಿಯೊಳಗೆ ಬಂದಿದೆ. ಆಭರಣ ಚಿನ್ನದ ಬೆಲೆ 12,000 ರೂ ಗಡಿಯೊಳಗೆ ಕುಸಿದಿದೆ. ವಿದೇಶಗಳಲ್ಲೂ ಇದರ ಬೆಲೆ ಇಳಿಮುಖವಾಗಿದೆ. ಬೆಳ್ಳಿ ಬೆಲೆಯಂತೂ ಪ್ರಚಂಡವಾಗಿ ಏರಿದ ರೀತಿಯಲ್ಲೇ ಕುಸಿತವನ್ನೂ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,14,650 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,25,080 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,14,650 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,900 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 17,400 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 23ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,508 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,465 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,381 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 159 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,508 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,465 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 159 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
ಭುವನೇಶ್ವರ್: 11,465 ರೂ
ಬೆಂಗಳೂರು: 11,465 ರೂ
ಚೆನ್ನೈ: 11,500 ರೂ
ಮುಂಬೈ: 11,465 ರೂ
ದೆಹಲಿ: 11,480 ರೂ
ಕೋಲ್ಕತಾ: 11,465 ರೂ
ಕೇರಳ: 11,465 ರೂ
ಅಹ್ಮದಾಬಾದ್: 11,470 ರೂ
ಜೈಪುರ್: 11,480 ರೂ
ಲಕ್ನೋ: 11,480 ರೂ



