Bullion Market 2025 October 30th: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಗುರುವಾರ ಇಳಿಕೆ ಕಂಡಿವೆ. ಚಿನ್ನದ ಬೆಲೆ 100 ರೂ ತಗ್ಗಿದರೆ, ಬೆಳ್ಳಿ ಬೆಲೆ 1 ರೂ ಇಳಿದಿದೆ. 22 ಕ್ಯಾರಟ್ ಚಿನ್ನದ ಬೆಲೆ 11,145 ರೂನಿಂದ 11,045 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 12,158 ರೂನಿಂದ 12,049 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 151 ರೂ ಇದೆ. ಚೆನ್ನೈ ಮೊದಲಾದ ಕೆಲವೆಡೆ ಬೆಲೆ 161 ರೂಗೆ ಇಳಿದಿದೆ.

ಬೆಂಗಳೂರು, ಅಕ್ಟೋಬರ್ 30: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ತಗ್ಗಿವೆ. ನಿನ್ನೆ ಗ್ರಾಮ್ಗೆ 70 ರೂ ಹೆಚ್ಚಿದ್ದ ಚಿನ್ನದ ಬೆಲೆ ಇವತ್ತು 100 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 12,000 ಗಡಿ ಸಮೀಪಕ್ಕೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ತಗ್ಗಿದೆ. ಬೆಳ್ಳಿ ಬೆಲೆಯೂ (silver rates) ಇಂದು ಗುರುವಾರ ಒಂದು ರೂ ಕಡಿಮೆಗೊಂಡಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,10,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,20,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 15,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 1,10,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 15,100 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 16,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಅಕ್ಟೋಬರ್ 30ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,049 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,045 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 9,037 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 12,049 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,045 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 151 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್ಗೆ)
- ಬೆಂಗಳೂರು: 11,045 ರೂ
- ಚೆನ್ನೈ: 11,100 ರೂ
- ಮುಂಬೈ: 11,045 ರೂ
- ದೆಹಲಿ: 11,060 ರೂ
- ಕೋಲ್ಕತಾ: 11,045 ರೂ
- ಕೇರಳ: 11,045 ರೂ
- ಅಹ್ಮದಾಬಾದ್: 11,050 ರೂ
- ಜೈಪುರ್: 11,060 ರೂ
- ಲಕ್ನೋ: 11,060 ರೂ
- ಭುವನೇಶ್ವರ್: 11,045 ರೂ




