News

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆಸ್ಪತ್ರೆಗೆ ದಾಖಲು: ಆರೋಗ್ಯ ವಿಚಾರಿಸಿದ ಸಿಎಂ

ಬೆಂಗಳೂರು, ಅಕ್ಟೋಬರ್​ 30: ತೀವ್ರ ಜ್ವರ ಹಿನ್ನೆಲೆ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ (thawar chand gehlot) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ವೈರಲ್ ಫೀವರ್​ ಹಿನ್ನೆಲೆ ಎರಡು ದಿನಗಳ ಹಿಂದೇ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಸಿಎಂ ಸಿದ್ದರಾಮಯ್ಯ (Siddaramaiah) ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಬೇಗ ಗುಣಮುಖರಾಗುವಂತೆ ಹಾರೈಸಿದ್ದಾರೆ.

ರಾಜ್ಯಪಾಲರ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರ ಆರೋಗ್ಯ ವಿಚಾರಿಸಿ, ಬೇಗ ಗುಣಮುಖರಾಗುವಂತೆ ಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಇತ್ತೀಚೆಗೆ ಮಧ್ಯಪ್ರದೇಶಕ್ಕೆ ತೆರಳಿದ್ದರು. ಈ ವೇಳೆ ಸರಣಿ ಕಾರ್ಯಕ್ರಮಗಳಲ್ಲಿ ಭಾಗಹಿಸಿದ್ದರು. ಹೀಗಾಗಿ ಆಯಾಸದಿಂದಾಗಿ ತೀವ್ರ ಜ್ವರ ಬಂದಿರಬಹುದು ಎನ್ನಲಾಗುತ್ತಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft