News Sports

ಗಾಲೆಯಲ್ಲಿ ಭಾರತದ ಭರ್ಜರಿ ಗೆಲುವು: ಶ್ರೀಲಂಕಾ ವಿರುದ್ಧ 165 ರನ್‌ಗಳ ಜಯ

ಕೊಲಂಬೊ, ಆ.19: ಭಾರತ ಮತ್ತು ಶ್ರೀಲಂಕಾ ತಂಡಗಳ ನಡುವೆ ನಡೆದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 165 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಭಾರತದ ಬೌಲರ್‌ಗಳ ಸಂಘಟಿತ ಪ್ರದರ್ಶನದ ಎದುರು ಶ್ರೀಲಂಕಾ ತಂಡ ಎರಡನೇ ಇನಿಂಗ್ಸ್‌ನಲ್ಲಿ 206 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿತು.

ಮೊದಲ ಇನಿಂಗ್ಸ್‌ನಲ್ಲಿ ಭಾರತ 462 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದಕ್ಕೆ ಪ್ರತಿಯಾಗಿ ಶ್ರೀಲಂಕಾ 284 ರನ್‌ಗಳಿಗೆ ಆಲೌಟ್ ಆಗಿತ್ತು. ಬಳಿಕ ಎರಡನೇ ಇನಿಂಗ್ಸ್‌ನಲ್ಲಿ ಭಾರತ 193 ರನ್ ಗಳಿಸಿ, ಶ್ರೀಲಂಕಾ ಗೆಲುವಿಗೆ 372 ರನ್‌ಗಳ ಗುರಿ ನೀಡಿತ್ತು.

ಗುರಿ ಬೆನ್ನತ್ತಿದ ಶ್ರೀಲಂಕಾ ತಂಡದ ಪರ ಧನಂಜಯ 59 ಹಾಗೂ ಸೋನಲ್ ದಿನುಶಾ 84 ರನ್ ಗಳಿಸಿ ಪ್ರತಿರೋಧ ತೋರಿದರು. ಇವರಿಬ್ಬರನ್ನು ಹೊರತುಪಡಿಸಿ ಉಳಿದ ಬ್ಯಾಟರ್‌ಗಳು ಭಾರತದ ಬೌಲಿಂಗ್ ದಾಳಿಯನ್ನು ಎದುರಿಸುವಲ್ಲಿ ವಿಫಲರಾದರು.

ಭಾರತದ ಗೆಲುವಿನಲ್ಲಿ ಯುವ ಸ್ಪಿನ್ನರ್ ಮಾನವ್ ಸುತಾರ್ ಪ್ರಮುಖ ಪಾತ್ರ ವಹಿಸಿದರು. ಎರಡನೇ ಇನಿಂಗ್ಸ್‌ನಲ್ಲಿ ಕೇವಲ 55 ರನ್ ನೀಡಿ ಆರು ವಿಕೆಟ್‌ಗಳನ್ನು ಕಬಳಿಸಿದ ಅವರು ಶ್ರೀಲಂಕಾ ಬ್ಯಾಟಿಂಗ್ ಪಡೆಯನ್ನು ಧ್ವಂಸಗೊಳಿಸಿದರು. ವಿಶೇಷವಾಗಿ ಕೊನೆಯ ನಾಲ್ವರು ಬ್ಯಾಟರ್‌ಗಳ ವಿಕೆಟ್‌ಗಳನ್ನು ಸುತಾರ್ ಅವರೊಬ್ಬರೇ ಪಡೆದು ಭಾರತದ ಗೆಲುವನ್ನು ಖಚಿತಪಡಿಸಿದರು.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft