News

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಗೃಹ ಸಚಿವ ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ SC, ST ನಾಯಕರ ಸಭೆ

ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮುದಾಯದ 20ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದು, SCSP-TSP ಅನುದಾನ ವಿಚಾರ ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಗೃಹ ಸಚಿವ ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ SC, ST ನಾಯಕರ ಸಭೆ

ಬೆಂಗಳೂರು, ಫೆಬ್ರವರಿ 04: ಕರ್ನಾಟಕ ರಾಜ್ಯ ವಿಧಾನ ಸಭಾ ವಿಶೇಷ ಅಧಿವೇಶನದ ಹೊತ್ತಲ್ಲಿಯೇ  ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆ ನಡೆದಿದೆ. ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ್ದ ಸೂಚನೆ ಈ ಮೀಟಿಂಗ್​ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದುಕೊಂಡಿದೆ.

ಸಚಿವರಾದ ಪರಮೇಶ್ವರ್, ಮುನಿಯಪ್ಪ, ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ. SCSP-TSP ಅನುದಾನ ಬಳಕೆ ಕುರಿತು ಸಭೆ ಹೆಸರಲ್ಲಿ ಕಾಂಗ್ರೆಸ್​ನ SC, ST ಸಚಿವರು, ಶಾಸಕರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದು, SCSP-TSP ಅನುದಾನ ಬೇರೆ ಯೋಜನೆಗಳಿಗೆ ಬಳಸ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್​ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ‌ ನೀಡಬೇಕು. SCSP-TSP ಹಣ ಯಾವುದಕ್ಕೆ ಮೀಸಲಿದೆಯೋ ಅದಕ್ಕೇ ಬಳಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿಯಾಗುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆಯೂ ಸಮಾಲೋಚನೆ ಈ ವೇಳೆ ನಡೆದಿದೆ ಎನ್ನಲಾಗಿದೆ.

SCSP, TSP ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು. ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿತ್ತು. ಆ ಬೆನ್ನಲ್ಲಿಯೇ ಈಗ ಸಮುದಾಯದ ನಾಯಕರ ಸಭೆ ನಡೆದಿರೋದು ಭಾರೀ ಕುತೂಹಲ ಮೂಡಿಸಿದೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft