News

ಶಾಲೆಯ ಹೊರಗಿನ ಹಬ್ಬದ ಮೆರವಣಿಗೆಯ ಡಿಜೆ ಸದ್ದಿನ ನಡುವೆ ತರಗತಿಯಲ್ಲೇ ಕುಸಿದು ಬಿದ್ದ 2ನೇ ತರಗತಿ ಬಾಲಕಿ ಸಾವು: ಶಬ್ದ ಮಾಲಿನ್ಯಕ್ಕೆ ಹೈಕೋರ್ಟ್ ಕೆಂಡಾಮಂಡಲ, “ಹಬ್ಬದ ಡಿಜೆಗಳು ದೇಶಕ್ಕೆ ಮಾರಕವಾಗಿ ಬಿಟ್ಟಿದೆ!” ಸುಪ್ರೀಂ ಆಕ್ರೋಶ

ಲಕ್ನೋ, 02-10-2026 : ಉತ್ತರ ಪ್ರದೇಶದ ಬಲರಾಮ್‌ಪುರದಲ್ಲಿ ಧಾರ್ಮಿಕ ಮೆರವಣಿಗೆಯೊಂದರಲ್ಲಿ ಅತಿಯಾದ ಶಬ್ದದ ಡಿಜೆ ಹಾಗೂ ಧ್ವನಿವರ್ಧಕಗಳನ್ನು ಬಳಸುತ್ತಿದ್ದ ಸಂದರ್ಭದಲ್ಲಿ ಶಾಲೆಯ ತರಗತಿಯಲ್ಲೇ ಕುಸಿದು ಬಿದ್ದು ಮೃತಪಟ್ಟ 2ನೇ ತರಗತಿಯ ಬಾಲಕಿಯ ಘಟನೆಯು ತೀವ್ರ ಕಳವಳಕ್ಕೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠವು ಶಬ್ದ ಮಾಲಿನ್ಯದ ಗಂಭೀರತೆಯನ್ನು ಪರಿಗಣಿಸಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ಆದೇಶಿಸಿದೆ.

ಬಲರಾಮ್‌ಪುರದ ಭಗೌತಿಗಂಜ್‌ನ ಡಿವೈನ್ ಪಬ್ಲಿಕ್ ಶಾಲೆಯಲ್ಲಿ ಸೆಪ್ಟೆಂಬರ್ 22ರಂದು ಈ ಘಟನೆ ನಡೆದಿತ್ತು. ಶಾಲೆಯ ಸಮೀಪದಿಂದ ಮೆರವಣಿಗೆಯೊಂದು ಸಾಗುತ್ತಿದ್ದ ವೇಳೆ ಅತಿಯಾದ ಶಬ್ದದಲ್ಲಿ ಡಿಜೆ ಮತ್ತು ಧ್ವನಿವರ್ಧಕಗಳನ್ನು ಬಳಸಲಾಗುತ್ತಿತ್ತು. ಈ ಸಂದರ್ಭದಲ್ಲಿ ತರಗತಿಯಲ್ಲಿದ್ದ ಬಾಲಕಿ ಏಕಾಏಕಿ ಕುಸಿದು ಬಿದ್ದಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಳು. ಬಾಲಕಿಯ ಸಾವಿಗೆ ಡಿಜೆ ಶಬ್ದವೇ ನೇರ ಕಾರಣ ಎಂಬುದನ್ನು ನ್ಯಾಯಾಲಯ ಇನ್ನೂ ದೃಢಪಡಿಸಿಲ್ಲ.

ಶಬ್ದ ಮಾಲಿನ್ಯಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು ಮಂಜೀವ್ ಶುಕ್ಲಾ ಅವರನ್ನೊಳಗೊಂಡ ವಿಭಾಗೀಯ ಪೀಠವು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪರಿಸರ ಸಂರಕ್ಷಣಾ ಕಾಯ್ದೆ 1986 ಹಾಗೂ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳು 2000 ಜಾರಿಯಲ್ಲಿದ್ದರೂ, ಸಾರ್ವಜನಿಕ ಸ್ಥಳಗಳಲ್ಲಿ ನಿಯಮಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿರುವುದಕ್ಕೆ ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ. ಶಬ್ದ ಮಾಲಿನ್ಯವು ಈಗ ಗಂಭೀರ ಸಮಸ್ಯೆಯಾಗಿ ಪರಿಣಮಿಸುತ್ತಿದೆ ಎಂದು ಅಭಿಪ್ರಾಯಪಟ್ಟಿದೆ.

ಶಬ್ದ ಮಾಲಿನ್ಯವನ್ನು ನಿಯಂತ್ರಿಸುವ ಹೊಣೆ ಯಾರ ಮೇಲಿದೆ, ಈಗಾಗಲೇ ಕೈಗೊಂಡಿರುವ ಕ್ರಮಗಳು ಎಷ್ಟರ ಮಟ್ಟಿಗೆ ಪರಿಣಾಮಕಾರಿಯಾಗಿವೆ ಮತ್ತು ನಿಯಮಗಳ ಪಾಲನೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲು ಯಾವ ವ್ಯವಸ್ಥೆ ರೂಪಿಸಬೇಕು ಎಂಬುದನ್ನು ಪರಿಶೀಲಿಸಲು ನ್ಯಾಯಾಲಯ ಮುಂದಾಗಿದೆ. ನಿಯಮ ಉಲ್ಲಂಘಿಸುವವರನ್ನು ಹೊಣೆಗಾರರನ್ನಾಗಿ ಮಾಡಬೇಕೆಂದು ತಿಳಿಸಿರುವ ಪೀಠ, ಬಾಲಕಿಯ ಪೋಷಕರು ಹಾಗೂ ಶಾಲಾ ಆಡಳಿತದ ಮೇಲೆ ಯಾವುದೇ ಒತ್ತಡ ಹೇರಬಾರದು ಮತ್ತು ಶಾಲೆಯ ಕಾರ್ಯನಿರ್ವಹಣೆಗೆ ಅನಗತ್ಯವಾಗಿ ಅಡ್ಡಿಪಡಿಸಬಾರದು ಎಂದೂ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 12ಕ್ಕೆ ನಿಗದಿಪಡಿಸಲಾಗಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft