
ಬೆಳಗಾವಿ : ತಡರಾತ್ರಿಯಿಂದಲೇ ಬೆಳಗಾವಿಯ ಬೀದಿಗಳಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಝೇಂಕಾರಗಳು ಮುಗಿಲು ಮುಟ್ಟಿವೆ.ಪ್ರತಿವರ್ಷದಂತೆ ಈ ಬಾರಿಯೂ ಗಡಿನಾಡ ಕನ್ನಡಿಗರು ರಾತ್ರಿಯೇ ಉತ್ಸವಕ್ಕೆ ಸಮಾವೇಶಗೊಂಡರು. ರಾತ್ರಿ 10ರ ನಂತರ ಏಕಾಏಕಿ ಸೇರಿದ ಕನ್ನಡಿಗರು ಇನ್ನಿಲ್ಲದಂತೆ ಸಂಭ್ರಮಿಸಿದರು. ಸಾವಿರ ಸಾವಿರ ಸಂಖ್ಯೆಯಲ್ಲಿ ಸೇರದ ಜನರಿಂದ ಇಡೀ ವೃತ್ತ ಕಿಕ್ಕಿರಿದು ತುಂಬಿತು. ಪರಿಣಾಮ ವೃತ್ತದ ನಾಲ್ಕೂ ದಿಕ್ಕಿನ ಸಂಚಾರ ಸಂಪೂರ್ಣ ಬಂದ್ ಆಯಿತು.ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಇದೇ ಮೊದಲ ಬಾರಿಗೆ ಸಿಡಿ ಮದ್ದಿನ ಪ್ರದರ್ಶನ , ಇಳಿಸಂಜೆಯಿಂದಲೇ ವೃತ್ತದಲ್ಲಿ ಡಿಜೆ ಸಂಗೀತಕ್ಕೆ ಯುವಕ, ಯುವತಿಯರು ಹುಚ್ಚೆದ್ದು ನರ್ತಿಸಿದರು. ಸರಿಯಾಗಿ ರಾತ್ರಿ 12ಕ್ಕೆ ಕರ್ನಾಟಕ ರಾಜ್ಯೋತ್ಸವಕ್ಕೆ ಜಯವಾಗಲಿ, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಜಯವಾಗಲಿ, ಯಾರಪ್ಪಂದು ಏನೈತಿ- ಬೆಳಗಾವಿ ನಮ್ಮದೈತಿ, ಪ್ರಾಣ ಕೊಟ್ಟೇವು- ಬೆಳಗಾವಿ ಬಿಡೆವು… ಮುಂತದ ಘೋಷಣೆಗಳು ಭೋರ್ಗರೆದವು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸರಿಯಾಗಿ 12 ಗಂಟೆಗೆ ಜೈಕಾರಗಳು ಮುಗಿಲು ಮುಟ್ಟಿದವು. ಅಪಾರ ಸಂಖ್ಯೆಯಲ್ಲಿ ಸೇರಿದ ಜನ ಕುಣಿದು ಕುಪ್ಪಳಿಸಿದರು. ಬಾನಲ್ಲಿ ಸಿಡಿ ಮದ್ದುಗಳ ಚಿತ್ತಾರ ಮೂಡಿತು. ಕಣ್ಣು ಕೋರೈಸುವ ವಿದ್ಯುದ್ದೀಪಾಲಂಲಾರ, ಕನ್ನಡ ಬಾವುಟಗಳ ಹಾರಾಟ, ಎಲ್ಲೆಲ್ಲೂ ಕನ್ನಡ ಝೇಂಕಾರ ಮೊಳಗಿತು.
ಬಾನಲ್ಲಿ ಸಿಡಿ ಮದ್ದುಗಳ ಚಿತ್ತಾರ ಮೂಡಿತು. ಕಣ್ಣು ಕೋರೈಸುವ ವಿದ್ಯುದ್ದೀಪಾಲಂಲಾರ, ಕನ್ನಡ ಬಾವುಟಗಳ ಹಾರಾಟ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಆರಂಭವಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕನ್ನಡ ಹೃದಯಗಳು ಅಭಿಮಾನದಿಂದ ಹೆಜ್ಜೆ ಹಾಕಿದವು.ಯುವಕರು, ಯುವತಿಯರು, ಮಕ್ಕಳು, ಮಹಿಳೆಯರು, ಹಿರಿಯರು ಕೂಡ ಇನ್ನಿಲ್ಲದಂತೆ ಸಂಭ್ರಮಿಸಿದರು. ಸದ್ಯ ಬೆಳಗಾವಿಯ ಕನ್ನಡ ರಾಜ್ಯೋತ್ಸವ ಆಚರಣೆಯ ವೀಡಿಯೋಗಳು ಕನ್ನಡದ ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿದೆ.

ಸಾವಿರ ಸಾವಿರ ಸಂಖ್ಯೆಯಲ್ಲಿ ಸೇರದ ಜನರಿಂದ ಇಡೀ ವೃತ್ತ ಕಿಕ್ಕಿರಿದು ತುಂಬಿತು. ಪರಿಣಾಮ ವೃತ್ತದ ನಾಲ್ಕೂ ದಿಕ್ಕಿನ ಸಂಚಾರ ಸಂಪೂರ್ಣ ಬಂದ್ ಆಯಿತು.ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಕನ್ನಡ ಸಂಘಟನೆಗಳ ಕಾರ್ಯಕರ್ತರು ಇದೇ ಮೊದಲ ಬಾರಿಗೆ ಸಿಡಿ ಮದ್ದಿನ ಪ್ರದರ್ಶನ , ಇಳಿಸಂಜೆಯಿಂದಲೇ ವೃತ್ತದಲ್ಲಿ ಡಿಜೆ ಸಂಗೀತಕ್ಕೆ ಯುವಕ, ಯುವತಿಯರು ಹುಚ್ಚೆದ್ದು ನರ್ತಿಸಿದರು. ಸರಿಯಾಗಿ ರಾತ್ರಿ 12ಕ್ಕೆ ಕರ್ನಾಟಕ ರಾಜ್ಯೋತ್ಸವಕ್ಕೆ ಜಯವಾಗಲಿ, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಜಯವಾಗಲಿ, ಯಾರಪ್ಪಂದು ಏನೈತಿ- ಬೆಳಗಾವಿ ನಮ್ಮದೈತಿ, ಪ್ರಾಣ ಕೊಟ್ಟೇವು- ಬೆಳಗಾವಿ ಬಿಡೆವು… ಮುಂತದ ಘೋಷಣೆಗಳು ಭೋರ್ಗರೆದವು ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸರಿಯಾಗಿ 12 ಗಂಟೆಗೆ ಜೈಕಾರಗಳು ಮುಗಿಲು ಮುಟ್ಟಿದವು.ಬಾನಲ್ಲಿ ಸಿಡಿ ಮದ್ದುಗಳ ಚಿತ್ತಾರ ಮೂಡಿತು. ಕಣ್ಣು ಕೋರೈಸುವ ವಿದ್ಯುದ್ದೀಪಾಲಂಲಾರ, ಕನ್ನಡ ಬಾವುಟಗಳ ಹಾರಾಟ, ಎಲ್ಲೆಲ್ಲೂ ಕನ್ನಡ ಝೇಂಕಾರ ಮೊಳಗಿತು.ಬಾನಲ್ಲಿ ಸಿಡಿ ಮದ್ದುಗಳ ಚಿತ್ತಾರ ಮೂಡಿತು. ಕಣ್ಣು ಕೋರೈಸುವ ವಿದ್ಯುದ್ದೀಪಾಲಂಲಾರ, ಕನ್ನಡ ಬಾವುಟಗಳ ಹಾರಾಟ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡು ಆರಂಭವಾಯಿತು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಕನ್ನಡ ಹೃದಯಗಳು ಅಭಿಮಾನದಿಂದ ಹೆಜ್ಜೆ ಹಾಕಿದವು.ಯುವಕರು, ಯುವತಿಯರು, ಮಕ್ಕಳು, ಮಹಿಳೆಯರು, ಹಿರಿಯರು ಕೂಡ ಇನ್ನಿಲ್ಲದಂತೆ ಸಂಭ್ರಮಿಸಿದರು.



