News

ಗರ್ಭಿಣಿಯ ಹೊಟ್ಟೆಗೆ ಒದ್ದ ಪೊಲೀಸರು! ಗರ್ಭಿಣಿ ಯುವತಿ ಅಂಜಲಿ ದಾರುಣ ಮೃತ್ಯು! ಉತ್ತರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕ್ರೌರ್ಯಗಳಿಗೆ ಕೊನೆ ಎಂದು!?

ಸ್ಥಳ, ದಿನಾಂಕ : ಫಿರೋಝಾಬಾದ್, ಸೆಪ್ಟೆಂಬರ್ 16 : ಉತ್ತರ ಪ್ರದೇಶದ ಫಿರೋಝಾಬಾದ್ ಜಿಲ್ಲೆಯ ಶಿಕೋಹಾಬಾದ್‌ನಲ್ಲಿ ಪತಿಯನ್ನು ಬಂಧಿಸಲು ಬಂದಿದ್ದ ಪೊಲೀಸರ ತಂಡವೊಂದು ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಹೆರಿಗೆ ಬಳಿಕ ಆಕೆ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು 28 ವರ್ಷದ ಅಂಜಲಿ ಎಂದು ಗುರುತಿಸಲಾಗಿದೆ.

ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ಅಂಜಲಿಯ ಪತಿ ಗೌರವ್ ಅವರನ್ನು ಬಂಧಿಸಲು ಪೊಲೀಸರು ರಾತ್ರಿ ಅವರ ಮನೆಗೆ ತೆರಳಿದ್ದರು ಎನ್ನಲಾಗಿದೆ. ಪತಿಯನ್ನು ಕರೆದೊಯ್ಯದಂತೆ ಅಂಜಲಿ ಮನವಿ ಮಾಡಿದಾಗ, ಉಪನಿರೀಕ್ಷಕ ಧರ್ಮಪಾಲ್ ಸಿಂಗ್ ಆಕೆಯ ಹೊಟ್ಟೆಗೆ ಒದ್ದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆಯ ಬಳಿಕ ಅಂಜಲಿಯ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದಿತ್ತು.

ಅಂಜಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೋಮವಾರ ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ಹೆರಿಗೆಯ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಫಿರೋಝಾಬಾದ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ನವಜಾತ ಶಿಶುವಿನ ಸ್ಥಿತಿಯೂ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಗ್ರಾಕ್ಕೆ ಸ್ಥಳಾಂತರಿಸಲಾಗಿದೆ.

ಘಟನೆಗೆ ಸಂಬಂಧಿಸಿ ಇಬ್ಬರು ಉಪನಿರೀಕ್ಷಕರು ಸೇರಿದಂತೆ ಆರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಲೋಪದ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಧರ್ಮಪಾಲ್ ಸಿಂಗ್, ಸತ್ಯಪಾಲ್ ಸಿಂಗ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಮೋಹನ್ ಸಿಂಗ್, ಅರವಿಂದ್ ಕುಮಾರ್ ಹಾಗೂ ಕಾನ್‌ಸ್ಟೆಬಲ್‌ಗಳಾದ ಭವತೋಷ್ ಕುಮಾರ್ ಮತ್ತು ಕುಲದೀಪ್ ಕುಮಾರ್ ಸೇರಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft