News

ಕಬ್ಬು ಬೆಳೆಗಾರರ ಹಿತಾಸಕ್ತಿಗೆ ಕೇಂದ್ರ ಯಾವತ್ತೂ ಬದ್ಧವಾಗಿದೆ! ಸಿದ್ದರಾಮಯ್ಯರ ಆರೋಪದಲ್ಲಿ ಹುರುಳಿಲ್ಲ: ಪ್ರಹ್ಲಾದ್ ಜೋಷಿ ತಿರುಗೇಟು!

ನವದೆಹಲಿ ನವೆಂ 8 : ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ಪಾದನೆಯಾದ ಎಥೆನಾಲ್-ಉತ್ಪಾದನೆ, ತೈಲ ಮಾರಾಟ ಸಂಸ್ಥೆಗಳಿಗೆ ಹಂಚಿಕೆ ಹಾಗೂ ರೈತರ ಸಮಸ್ಯೆಗಳ ಕುರಿತು ಕೇಂದ್ರ ಸರಕಾರದ ಅಥವಾ ಕೇಂದ್ರದ ಸದಸ್ಯ ಸಚಿವರ ವಿರುದ್ಧ ಆರೋಪಗಳನ್ನು ಮಾಡಿಕೊಂಡಿದ್ದಾರೆ. ಪ್ರಹ್ಲಾದ್ ಜೋಶಿ ಅವರು ಸಿದ್ಧರಾಮಯ್ಯ ಅವರ ಹೇಳಿಕೆಗಳನ್ನು ಸತ್ಯಗಳಿಲ್ಲದೆ ಮಾತನಾಡಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದತ್ತ ಬೆರಳು ತೋರಿಸುತ್ತಾ, ರಾಜ್ಯದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ. ಕಬ್ಬು ಬೆಳೆಗಾರರಿಗಾಗಿ ಕೇಂದ್ರ ಮಾಡಿದ್ದೇನು? ಎಂಬ ಪ್ರಶ್ನೆಗೆ ದಾಖಲೆ ಸಮೇತ ಸಿಎಂ ಸಿದ್ದರಾಮಯ್ಯಗೆ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಕ್ವಿಂಟಲ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕೇಂದು ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ, ಕೇಂದ್ರ ಸರ್ಕಾರ ಕಬ್ಬು ಬೆಳೆಗಾರರ ಹಿತವನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಪ್ರಧಾನಿ ಮೋದಿ ಅವಧಿಯಲ್ಲಿ FRP ಹೆಚ್ಚಳ, ಎಥೆನಾಲ್ ಉತ್ಪಾದನೆಗೆ ಉತ್ತೇಜನ ಹಾಗೂ ಸಕ್ಕರೆ ರಫ್ತಿನಿಂದ ರೈತರಿಗೆ ಲಾಭವಾಗಿದೆ ಎಂಬುದನ್ನು ಒತ್ತಿಹೇಳಿದ ಅವರು, ಕರ್ನಾಟಕ ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ದಾಖಲೆಗಳ ಸಮೇತ ಉತ್ತರ ನೀಡಿದ್ದಾರೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft