News Weather forecasting

ಕರಾವಳಿಗೆ ಮತ್ತೆ ಮಳೆ ಅಬ್ಬರ; ಅ.10ರವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ


ಮಂಗಳೂರು, 05-10-2026 : ಕರಾವಳಿ ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದ್ದು, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಅಕ್ಟೋಬರ್ 10ರವರೆಗೆ ಅಲ್ಲಲ್ಲಿ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸೋಮವಾರ ಮುಂಜಾನೆ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಕರಾವಳಿ ಭಾಗದಲ್ಲಿ ಹಗಲು ಮೋಡ ಕವಿದ ವಾತಾವರಣದೊಂದಿಗೆ ತುಂತುರುದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ತೀರದಲ್ಲಿ ಮಳೆಯ ಪ್ರಮಾಣ ತುಸು ಹೆಚ್ಚಾಗುವ ಸಾಧ್ಯತೆಯೂ ಇದೆ.

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿಯೂ ಹಗಲು ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಘಟ್ಟ ಪ್ರದೇಶಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 10ರವರೆಗೆ ಕರಾವಳಿ ಜಿಲ್ಲೆಗಳ ಕೆಲವೆಡೆ ಸಂಜೆ ಗುಡುಗು ಮಳೆ ಮುಂದುವರಿಯಬಹುದು.

ಅರಬ್ಬೀ ಸಮುದ್ರದ ಸಮೀಪ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಾಗೂ ತೇವಾಂಶಯುಕ್ತ ಮೋಡಗಳ ಪ್ರಭಾವದಿಂದ ರಾಜ್ಯದ ವಿವಿಧ ಭಾಗಗಳಲ್ಲಿಯೂ ಮಳೆಯ ವಾತಾವರಣ ಕಂಡುಬರುತ್ತಿದೆ. ಹವಾಮಾನ ಇಲಾಖೆಯ ಪ್ರಕಾರ ಕರಾವಳಿ ಕರ್ನಾಟಕದಲ್ಲಿ ಅ.5ರಂದು ಗುಡುಗು-ಮಿಂಚು ಸಹಿತ ಭಾರಿ ಮಳೆಯ ಎಚ್ಚರಿಕೆ ಇದ್ದು, ಮುಂದಿನ ದಿನಗಳಲ್ಲಿ ಪ್ರತ್ಯೇಕವಾಗಿ ಮಳೆಯ ಸಾಧ್ಯತೆ ಮುಂದುವರಿಯಲಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft