News

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ – ಮದರಸಾಕ್ಕೆ ಪುಂಡರಿಂದ ಕಲ್ಲು ತೂರಾಟ ; ಭಟ್ಕಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಭಟ್ಕಳ, ಸೆಪ್ಟೆಂಬರ್ 17 : ಗಣಪತಿ ವಿಸರ್ಜನಾ ಮೆರವಣಿಗೆ ಸಾಗುತ್ತಿದ್ದ ವೇಳೆ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ ನಡೆಸಲಾಗಿದೆ ಎಂಬ ಆರೋಪ ಭಟ್ಕಳದಲ್ಲಿ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬುಧವಾರ ರಾತ್ರಿ ತಲಾಂದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ವಿಸರ್ಜನಾ ಮೆರವಣಿಗೆ ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮೆರವಣಿಗೆಯ ಮಾರ್ಗದಲ್ಲಿದ್ದ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ತಾಜುಸುನ್ನಾ ಅರೇಬಿಕ್ ಮದರಸಾಕ್ಕೆ ಅಪರಿಚಿತರು ಕಲ್ಲುಗಳನ್ನು ಎಸೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಕಲ್ಲು ತೂರಾಟದಿಂದ ಎರಡೂ ಕಟ್ಟಡಗಳ ಕಿಟಕಿ ಗಾಜುಗಳಿಗೆ ಹಾನಿಯಾಗಿದೆ ಎಂದು ದೂರುದಾರರು ತಿಳಿಸಿದ್ದಾರೆ. ಈ ಕೃತ್ಯದಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದು, ಶಾಂತಿ-ಸುವ್ಯವಸ್ಥೆಗೆ ತೊಂದರೆ ಉಂಟುಮಾಡುವ ಉದ್ದೇಶವಿತ್ತು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಯ ಮಾಹಿತಿ ಹರಡುತ್ತಿದ್ದಂತೆ ನೂರಾರು ಮಂದಿ ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ, ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಬ್ದುಲ್ ಅಲಿಂ ಹಾಗೂ ಶಾಹುಲ್ ಅಮೀನ್ ಗವಾಯಿ ಅವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೆಲ ಸದಸ್ಯರನ್ನು ಪೊಲೀಸರು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಘಟನೆಯ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಸಿಪಿಐ ದಿವಾಕರ ಪಿ.ಎಂ. ಹಾಗೂ ಪಿಎಸ್‌ಐ ನವೀನ ನಾಯ್ಕ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft