ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ ದೇಶದ 2ನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ
ಚಿನ್ನಸ್ವಾಮಿ ಕ್ರೀಡಾಂಗಣದ ಸಾಮರ್ಥ್ಯದ ಕೊರತೆ ಮತ್ತು ಜೂನ್ 4ರ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ಬೆಂಗಳೂರಿನ ಹೊರವಲಯದಲ್ಲಿ 80,000 ಆಸನಗಳ ಅತ್ಯಾಧುನಿಕ ಕ್ರೀಡಾ ಸಂಕೀರ್ಣ ನಿರ್ಮಿಸಲು ಅನುಮೋದನೆ ನೀಡಿದೆ. ಇದು ಕ್ರಿಕೆಟ್ ಸೇರಿದಂತೆ ಹಲವು ಕ್ರೀಡೆಗಳಿಗೆ ಸೌಲಭ್ಯಗಳನ್ನು ಒದಗಿಸಲಿದೆ. ಕರ್ನಾಟಕ ವಸತಿ ಮಂಡಳಿಯು ಯೋಜನೆಯನ್ನು ಕೈಗೆತ್ತಿಕೊಳ್ಳಲಿದೆ. ಕರ್ನಾಟಕದ ಕ್ರಿಕೆಟ್ ಪ್ರಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ಚಿನ್ನಸ್ವಾಮಿ (M. Chinnaswamy Stadium) ಕಾಲ್ತುಳಿತ ದುರಂತದ ಬಳಿಕ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಹೊರವಲಯದಲ್ಲಿ ಕ್ರೀಡಾಂಗಣ ನಿರ್ಮಿಸಲು […]


