News

‘ಸಿದ್ದರಾಮಯ್ಯ vs ಜಮೀರ್ ಅಹ್ಮದ್’ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ಸಂಪೂರ್ಣ ನಕಲಿ ಹಾಗೂ ಸೃಷ್ಟಿಸಲ್ಪಟ್ಟದ್ದು : ಫ್ಯಾಕ್ಟ್ ಚೆಕ್

ಬೆಂಗಳೂರು, ಜೂನ್ 11, 2026: ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಮತ್ತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡುವೆ ಅಸಮಾಧಾನವಿದೆ ಎಂದು ಬಿಂಬಿಸುವ ನಿಟ್ಟಿನಲ್ಲಿ ಹರಿದಾಡುತ್ತಿರುವ ಆಡಿಯೋ ಮತ್ತು ವಿಡಿಯೋ ತುಣುಕುಗಳು ಸಂಪೂರ್ಣವಾಗಿ ನಕಲಿ ಮತ್ತು ರಾಜಕೀಯ ಪಿತೂರಿಯಿಂದ ಸೃಷ್ಟಿಸಲ್ಪಟ್ಟದ್ದಾಗಿವೆ ಎಂದು ಫ್ಯಾಕ್ಟ್ ಚೆಕ್ ಸ್ಪಷ್ಟಪಡಿಸಿದೆ. ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಂಡು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುವ ಇಂತಹ ಕಿಡಿಗೇಡಿತನದ ಕೃತ್ಯಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಈ ಬಗ್ಗೆ ಇಲಾಖೆ ಎಚ್ಚರಿಸಿದೆ.

​ಆಡಿಯೋದಲ್ಲಿ ಬಿಂಬಿತವಾಗಿರುವಂತೆ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ನನ್ನ ವಿರುದ್ಧ ಕೆಲಸ ಮಾಡಿದ್ದಾರೆ ಎಂಬ ಹೇಳಿಕೆ ಕಲ್ಪಿತವಾಗಿದೆ. ಜಮೀರ್ ಅಹ್ಮದ್ ಅವರು ನಮ್ಮ ಸರ್ಕಾರದ ಪ್ರಮುಖ ಮತ್ತು ಅತ್ಯಂತ ನಿಕಟ ಸಹೋದ್ಯೋಗಿಯಾಗಿದ್ದು, ಪಕ್ಷ ಮತ್ತು ಸರ್ಕಾರದ ಬೆಳವಣಿಗೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಅವರ ಬೆಂಬಲಿಗರು ನನ್ನನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಇಂತಹ ಯಾವುದೇ ಮಾತುಕತೆ ನಡೆದಿಲ್ಲ ಮತ್ತು ಹರಿದಾಡುತ್ತಿರುವ ದೃಶ್ಯಾವಳಿಗಳನ್ನು ತಿರುಚಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ

​ಇತ್ತೀಚಿನ ದಿನಗಳಲ್ಲಿ ರಾಜಕೀಯ ವಿರೋಧಿಗಳು ಮತ್ತು ಕೆಲವು ಹಿತಾಸಕ್ತಿಗಳು ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರಲು ಡಿಜಿಟಲ್ ತಂತ್ರಜ್ಞಾನ ಹಾಗೂ ಕೃತಕ ಬುದ್ಧಿಮತ್ತೆಯನ್ನು (AI) ಬಳಸಿಕೊಂಡು ನಕಲಿ ಆಡಿಯೋ-ವಿಡಿಯೋಗಳನ್ನು ಸೃಷ್ಟಿಸುತ್ತಿದ್ದಾರೆ. ಈ ಹಿಂದೆಯೂ ಇಂತಹದ್ದೇ ಒಂದು ನಕಲಿ ಆಡಿಯೋ ವೈರಲ್ ಆಗಿದ್ದನ್ನು ಉಲ್ಲೇಖಿಸಿದ ಅವರು, ಈ ಬಗ್ಗೆ ಈಗಾಗಲೇ ಮಾನ್ಯ ನ್ಯಾಯಾಲಯವು ಇಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ನೆನಪಿಸಿದ್ದಾರೆ.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft