Health +

ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ

ಇಂದಿನ ಕಾಲದಲ್ಲಿ, ಹೃದಯಾಘಾತದ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಇದು ಹೆಚ್ಚಾಗಿ ಹೆಚ್ಚಿನ ಕೊಲೆಸ್ಟ್ರಾಲ್‌ಗೆ ಸಂಬಂಧಿಸಿದಂತೆ ಕಂಡುಬರುತ್ತದೆ, ಆದರೆ ಅಂತಹ ಸಂದರ್ಭಗಳಲ್ಲಿ, ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತ ಸಂಭವಿಸಬಹುದೇ? ಹಾಗಾದರೆ ಅದಕ್ಕೆ ಕಾರಣಗಳೇನು? ನಮ್ಮ ಹೃದಯವನ್ನು ಆರೋಗ್ಯವಾಗಿಟ್ಟುಕೊಳ್ಳಲು ಏನು ಮಾಡಬೇಕು, ಯಾವ ರೀತಿಯ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬಾರದು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು? ತಡೆಗಟ್ಟಲು ಇಲ್ಲಿದೆ ಸಲಹೆ

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ವೇಗವಾಗಿ ಹೆಚ್ಚುತ್ತಿವೆ. ಹಿಂದೆ ವಯೋವೃದ್ಧರಲ್ಲಿ ಹೆಚ್ಚು ಕಂಡುಬರುತ್ತಿದ್ದ ಈ ಸಮಸ್ಯೆ ಈಗ ಯುವಕರಲ್ಲಿಯೂ ಕಾಣಿಸಿಕೊಳ್ಳುತ್ತಿದೆ. ಸಾಮಾನ್ಯವಾಗಿ ಹೃದಯಾಘಾತಕ್ಕೆ ಹೆಚ್ಚಿದ ಕೊಲೆಸ್ಟ್ರಾಲೇ ಮುಖ್ಯ ಕಾರಣ ಎಂದು ಹಲವರು ಭಾವಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಕೊಲೆಸ್ಟ್ರಾಲ್ ಮಟ್ಟ ಸಾಮಾನ್ಯವಾಗಿದ್ದರೂ ಕೂಡ ಕೆಲವರಿಗೆ ಹೃದಯಾಘಾತ ಸಂಭವಿಸುವ ಸಾಧ್ಯತೆ ಇದೆ. ದೇಹದಲ್ಲಿ ಬ್ಯಾಡ್ ಕೊಲೆಸ್ಟ್ರಾಲ್ ಹೆಚ್ಚಾದರೆ ರಕ್ತನಾಳಗಳಲ್ಲಿ ಕೊಬ್ಬು ಜಮೆಯಾಗುತ್ತದೆ. ಇದರಿಂದ ಹೃದಯಕ್ಕೆ ರಕ್ತ ಸರಿಯಾಗಿ ಹರಿಯದೇ ಹೃದಯಾಘಾತದ ಅಪಾಯ ಹೆಚ್ಚಬಹುದು. ಆದರೆ ಹೃದಯ ಆರೋಗ್ಯವು ಕೇವಲ ಕೊಲೆಸ್ಟ್ರಾಲ್ ಮಟ್ಟದ ಮೇಲೆ ಮಾತ್ರ ಅವಲಂಬಿತವಾಗಿರುವುದಿಲ್ಲ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಹಾಗಾದರೆ ಹೈ ಕೊಲೆಸ್ಟ್ರಾಲ್ ಅಪಾಯ ಇಲ್ಲದಿದ್ದರೂ ಹೃದಯಾಘಾತವಾಗುವುದಕ್ಕೆ ಕಾರಣವೇನು, ಹೃದಯವನ್ನು ಆರೋಗ್ಯವಾಗಿಡಲು ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹೈ ಕೊಲೆಸ್ಟ್ರಾಲ್ ಇಲ್ಲದಿದ್ದರೂ ಹೃದಯಾಘಾತಕ್ಕೆ ಕಾರಣಗಳೇನು?

ಅಮೆರಿಕನ್ ಹಾರ್ಟ್ ಅಸೋಸಿಯೇಷನ್ (AHA) ಪ್ರಕಾರ, ಹೃದಯಾಘಾತದ ಅಪಾಯವನ್ನು ಹೆಚ್ಚಿಸುವ ಹಲವು ಅಂಶಗಳಿವೆ. ಜೀವನಶೈಲಿ, ಆಹಾರ ಪದ್ಧತಿ ಮತ್ತು ಇತರ ಆರೋಗ್ಯ ಸಮಸ್ಯೆಗಳೂ ಹೃದಯಾಘಾತಕ್ಕೆ ಕಾರಣವಾಗಬಹುದು. ಅಲ್ಲದೆ ಹೈ ಬ್ಲಡ್ ಪ್ರೆಶರ್, ಮಧುಮೇಹ, ಧೂಮಪಾನ, ಅತಿಯಾದ ಒತ್ತಡ, ದೇಹದ ತೂಕ ಹೆಚ್ಚಳ, ವ್ಯಾಯಾಮದ ಕೊರತೆ ಮತ್ತು ಕುಟುಂಬದ ಆರೋಗ್ಯ ಇತಿಹಾಸವು ಪ್ರಮುಖ ಕಾರಣಗಳಾಗಬಹುದು. ಕೆಲವರು ಆರೋಗ್ಯಕರ ಕೊಲೆಸ್ಟ್ರಾಲ್ ಮಟ್ಟ ಹೊಂದಿದ್ದರೂ ಕೂಡ ಮಾನಸಿಕ ಒತ್ತಡ ಅಥವಾ ಅಸ್ವಸ್ಥ ಜೀವನಶೈಲಿಯಿಂದ ಹೃದಯ ಸಂಬಂಧಿ ಸಮಸ್ಯೆಗಳನ್ನು ಎದುರಿಸಬಹುದು. ಆದ್ದರಿಂದ ಕೇವಲ ಕೊಲೆಸ್ಟ್ರಾಲ್ ವರದಿ ನೋಡಿ ಹೃದಯದ ಸ್ಥಿತಿಯನ್ನು ಅಂದಾಜು ಮಾಡುವುದು ಸರಿಯಲ್ಲ ಎಂದು ತಜ್ಞರು ಹೇಳುತ್ತಾರೆ.

ಹೃದಯಾಘಾತದ ಈ ಲಕ್ಷಣಗಳನ್ನು ನಿರ್ಲಕ್ಷ್ಯ ಮಾಡಬೇಡಿ

ಸಾಮಾನ್ಯವಾಗಿ ಹೃದಯಾಘಾತವಾಗುವ ಮೊದಲು ಕೆಲವರಲ್ಲಿ ಎದೆನೋವು, ಎದೆ ಮೇಲೆ ಒತ್ತಡದ ಅನುಭವ, ಉಸಿರಾಟದ ತೊಂದರೆ, ತೀವ್ರ ದಣಿವು, ತಲೆಸುತ್ತು, ಕೈ, ಭುಜ, ಕುತ್ತಿಗೆ ಅಥವಾ ದವಡೆಯಲ್ಲಿ ನೋವು ಕಾಣಿಸಬಹುದು. ಮಹಿಳೆಯರು ಹಾಗೂ ಮಧುಮೇಹ ಇರುವವರಲ್ಲಿ ಲಕ್ಷಣಗಳು ವಿಭಿನ್ನವಾಗಿರಬಹುದು. ಯಾವುದೇ ಈ ರೀತಿಯ ಸಾಮಾನ್ಯವಲ್ಲದ ಲಕ್ಷಣಗಳು ಪದೇಪದೇ ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಬಹಳ ಮುಖ್ಯ.

ಹೃದಯವನ್ನು ಆರೋಗ್ಯವಾಗಿಡಲು ಏನು ಮಾಡಬೇಕು?

ಹೃದಯ ಆರೋಗ್ಯಕ್ಕಾಗಿ ಸಮತೋಲನ ಆಹಾರ ಸೇವನೆ, ನಿಯಮಿತ ವ್ಯಾಯಾಮ ಮತ್ತು ಧೂಮಪಾನದಿಂದ ದೂರವಿರುವುದು ಅಗತ್ಯ. ಜೊತೆಗೆ ಬಿಪಿ, ಶುಗರ್ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳಬೇಕು. ಸಾಕಷ್ಟು ನಿದ್ರೆ, ಒತ್ತಡ ನಿಯಂತ್ರಣ ಮತ್ತು ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳುವುದೂ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.

Spread the love

Irshad

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft