News

ವಿದ್ಯುತ್ ಸ್ಮಾರ್ಟ್ ಮೀಟರ್ ಕೇಸ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್ ರೀಲೀಫ್
ರಾಜ್ಯದಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಟೆಂಡರ್‌ ಆಕ್ರಮ ಆರೋಪದ ಕೇಸ್ ನಲ್ಲಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಗೆ ಆದೇಶ ನೀಡಿದ್ದ ಜನಪ್ರತಿನಿಧಿಗಳ ವಿಶೇಶ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರತಿವಾದಿಗಳಿಗೆ ಹೈಕೋರ್ಟ್ ನೋಟೀಸ್ ನೀಡಿದೆ. ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್ ರೀಲೀಫ್ ಸಿಕ್ಕಿದೆ.
ರಾಜ್ಯದಲ್ಲಿ ಇಂಧನ ಇಲಾಖೆಯು ಎಲ್ಲ ಮನೆಗಳಲ್ಲಿ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಆದೇಶ ನೀಡಿತ್ತು. ಬಳಿಕ ಟೆಂಡರ್ ಅನ್ನು ಕೂಡ ನೀಡಿತ್ತು. ಆದರೇ, ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ನಾಯಕರಾದ ಶಾಸಕ ಸಿ.ಎನ್.ಅಶ್ವಥ್ ನಾರಾಯಣ್, ಯಲಹಂಕ ಕ್ಷೇತ್ರದ ಶಾಸಕ ಎಸ್‌.ಆರ್.ವಿಶ್ವನಾಥ್, ಶಾಸಕ ಧೀರಜ್ ಮುನಿರಾಜ್ ಸೇರಿದಂತೆ ಕೆಲವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕೇಸ್ ದಾಖಲಿಸಿದ್ದರು. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಈ ಅರ್ಜಿಗೆ ಮನ್ನಣೆ ನೀಡಿ, ರಾಜ್ಯದ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಬೆಸ್ಕಾಂ ಎಂ.ಡಿ. ಸೇರಿದಂತೆ ಅಧಿಕಾರಿಗಳ ವಿರುದ್ಧ ತನಿಖೆಗೆ ಲೋಕಾಯುಕ್ತಕ್ಕೆ ಆದೇಶ ನೀಡಿತ್ತು.

ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ಈ ಆದೇಶವನ್ನು ಪ್ರಶ್ನಿಸಿ ಇಂಧನ ಸಚಿವ ಕೆ.ಜೆ.ಜಾರ್ಜ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಇಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಿತು. ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ, ಟೆಂಡರ್ ಪ್ರಕರಣದಲ್ಲಿ ಲೋಕಾಯುಕ್ತ ತನಿಖೆಗೆ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಪ್ರತಿವಾದಿಗಳಾದ ಮಲ್ಲೇಶ್ವರ ಶಾಸಕ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಎಸ್‌.ಆರ್.ವಿಶ್ವನಾಥ್, ಶಾಸಕ ಧೀರಜ್ ಮುನಿರಾಜ್ ಅವರಿಗೆ ನೋಟೀಸ್ ಜಾರಿ ಮಾಡಿದೆ. ಎರಡು ವಾರಗಳ ಕಾಲ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಅಷ್ಟರೊಳಗೆ ಪ್ರತಿವಾದಿಗಳು ಹೈಕೋರ್ಟ್ ಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸಬೇಕು.
ಹೈಕೋರ್ಟ್ ಆದೇಶದಿಂದಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಗೆ ಬಿಗ್‌ ರೀಲೀಫ್ ಸಿಕ್ಕಂತಾಗಿದೆ. ಪ್ರತಿವಾದಿಗಳ ವಾದವನ್ನು ಆಲಿಸಿದ ಬಳಿಕ ಹೈಕೋರ್ಟ್, ಜನಪ್ರತಿನಿಧಿಗಳ ಕೋರ್ಟ್, ಸಚಿವ ಕೆ.ಜೆ.ಜಾರ್ಜ್ ವಿರುದ್ಧ ತನಿಖೆಗೆ ಆದೇಶ ನೀಡಿರುವುದು ಸರಿಯೇ ತಪ್ಪೇ ಎಂಬ ಬಗ್ಗೆ ತನ್ನ ಅಂತಿಮ ಆದೇಶ ನೀಡಲಿದೆ.
ಹೈಕೋರ್ಟ್ ನಲ್ಲಿ ಇಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪರವಾಗಿ ಹಿರಿಯ ವಕೀಲರಾದ ಸಿ.ವಿ.ನಾಗೇಶ್ ಮತ್ತು ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದ್ದರು.

Spread the love

admin

About Author

Leave a Reply

Your email address will not be published. Required fields are marked *

Get Latest Updates and News

    Our expertise, as well as our passion for news, sets us apart from other news portal.

    Dream Times @2025. All Rights Reserved. Powered By Exalt Techsoft